ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಯುಕೆ ನೂತನ ಪ್ರಧಾನಿ ಕೀರ್ ಸ್ಟಾರ್ಮರ್ ಅವರೊಂದಿಗೆ ಇಂದು ದೂರವಾಣಿ ಸಂಭಾಷಣೆ ನಡೆಸಿದರು. ಸ್ಟಾರ್ಮರ್ ಅವರ ಇತ್ತೀಚಿನ ಚುನಾವಣಾ ಗೆಲುವು ಮತ್ತು ಯುಕೆ ಪ್ರಧಾನಿಯಾಗಿ ಅವರ ಹೊಸ ಪಾತ್ರಕ್ಕಾಗಿ ಮೋದಿ ಅವರನ್ನು ಅಭಿನಂದಿಸಿದರು. ಪ್ರಧಾನಮಂತ್ರಿಗಳ ಕಚೇರಿ (PMO) ಪ್ರಕಾರ ಭಾರತಕ್ಕೆ ಭೇಟಿ ನೀಡಲು ಸ್ಟಾರ್ಮರ್ಗೆ ಮೋದಿ ಆಹ್ವಾನವನ್ನೂ ನೀಡಿದರು.
ಪಿಎಂ ನರೇಂದ್ರ ಮೋದಿ ಮತ್ತು ಯುಕೆ ಪಿಎಂ ಕೀರ್ ಸ್ಟಾರ್ಮರ್ ಅವರು ಭಾರತ ಮತ್ತು ಯುಕೆ ನಡುವಿನ ಐತಿಹಾಸಿಕ ಬಾಂಧವ್ಯವನ್ನು ನೆನಪಿಸಿಕೊಂಡರು ಮತ್ತು ಉಭಯ ರಾಷ್ಟ್ರಗಳ ನಡುವಿನ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಆಳಗೊಳಿಸುವ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ ಎಂದು ಹೇಳಿಕೆ ತಿಳಿಸಿದೆ.
ಉಭಯ ನಾಯಕರು ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸುವ ಮಹತ್ವವನ್ನು ಒತ್ತಿ ಹೇಳಿದರು.
ಯುಕೆಯ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಅಭಿವೃದ್ಧಿಯಲ್ಲಿ ಭಾರತೀಯ ಸಮುದಾಯದ ಸಕಾರಾತ್ಮಕ ಕೊಡುಗೆಗಳನ್ನು ಶ್ಲಾಘಿಸಿದ ಅವರು, ಜನರು-ಜನರ ನಡುವಿನ ನಿಕಟ ಸಂಬಂಧಗಳನ್ನು ಉತ್ತೇಜಿಸಲು ಅವರು ಒಪ್ಪಿಕೊಂಡರು ಎಂದು PMO ಯ ಹೇಳಿಕೆ ತಿಳಿಸಿದೆ.
Pleased to speak with @Keir_Starmer. Congratulated him on being elected as the Prime Minister of the UK. We remain committed to deepening Comprehensive Strategic Partnership and robust 🇮🇳-🇬🇧 economic ties for the progress and prosperity of our peoples and global good.
— Narendra Modi (@narendramodi) July 6, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.