ನವದೆಹಲಿ: 2024-25ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್ ಅನ್ನು ಜುಲೈ 23 ರಂದು ಮಂಡಿಸಲಾಗುವುದು ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಸಂಸತ್ ಅಧಿವೇಶನ ಒಂದು ದಿನ ಮುಂಚಿತವಾಗಿ ಅಧಿವೇಶನ ಪ್ರಾರಂಭವಾಗಲಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಘೋಷಿಸಿದ್ದಾರೆ. ಜುಲೈ 22 ರಂದು ಅಧಿವೇಶನ ಪ್ರಾರಂಭವಾಗಲಿದ್ದು, ಆಗಸ್ಟ್ 12 ರಂದು ಮುಕ್ತಾಯಗೊಳ್ಳಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವರು ತಿಳಿಸಿದ್ದಾರೆ.
ಭಾರತದ ಗೌರವಾನ್ವಿತ ರಾಷ್ಟ್ರಪತಿಗಳು, ಭಾರತ ಸರ್ಕಾರದ ಶಿಫಾರಸಿನ ಮೇರೆಗೆ, 2024 ರ ಜುಲೈ 22 ರಿಂದ 2024 ರ ಬಜೆಟ್ ಅಧಿವೇಶನಕ್ಕಾಗಿ ಸಂಸತ್ತಿನ ಉಭಯ ಸದನಗಳನ್ನು ಕರೆಯುವ ಪ್ರಸ್ತಾವನೆಯನ್ನು ಅನುಮೋದಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿಯಲ್ಲಿ ಮಧ್ಯಂತರ ಬಜೆಟ್ ಅನ್ನು ಮಂಡಿಸಿದ್ದರು, ಏಕೆಂದರೆ ಅದು ಸಾರ್ವತ್ರಿಕ ಚುನಾವಣೆ ವರ್ಷವಾಗಿತ್ತು. ಸೀತಾರಾಮನ್ ಅವರು ತಮ್ಮ ಸತತ ಏಳನೇ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ. ಮೊರಾರ್ಜಿ ದೇಸಾಯಿ ಅವರು ನಿರ್ಮಿಸಿದ ಹಿಂದಿನ ದಾಖಲೆಯನ್ನು ಮೀರಿ ಇತಿಹಾಸದಲ್ಲಿ ಅತಿಹೆಚ್ಚು ಬಾರಿ ಬಜೆಟ್ ಮಂಡಿಸಿದ ಮೊದಲ ಹಣಕಾಸು ಮಂತ್ರಿಯಾಗಿದ್ದಾರೆ.
Hon’ble President of India, on the recommendation of Government of India, has approved the proposal for summoning of both the Houses of Parliament for the Budget Session, 2024 from 22nd July, 2024 to 12 August, 2024 (Subject to exigencies of Parliamentary Business). Union Budget,…
— Kiren Rijiju (@KirenRijiju) July 6, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.