ಕೋಲ್ಕತ್ತಾ: ಪಶ್ಚಿಮಬಂಗಾಳ ರಾಜ್ಯದಲ್ಲಿ ಮತ್ತೊಂದು ಘಟನೆ ನಡೆದಿದ್ದು ಪುರುಷರ ಗುಂಪೊಂದು ಮಹಿಳೆಗೆ ಮನಸ್ಸೋ ಇಚ್ಛೆ ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದರ ಬೆನ್ನಲ್ಲೇ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ.
ಉತ್ತರ 24 ಪರಗಣ ಜಿಲ್ಲೆಯ ಕ್ಲಬ್ನೊಳಗೆ ಜನರ ಗುಂಪೊಂದು ಬಾಲಕಿಯ ಮೇಲೆ ಹಲ್ಲೆ ನಡೆಸುತ್ತಿರುವ ವೀಡಿಯೊ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಬಾಲಕಿಯ ಮೇಲಿನ ಹಲ್ಲೆಯ ಹಿಂದಿನ ಉದ್ದೇಶ ಇನ್ನೂ ತಿಳಿದುಬಂದಿಲ್ಲ.
ಬಾಲಕಿಗೆ ಚಿತ್ರಹಿಂಸೆ ನೀಡುವುದರ ಹಿಂದೆ ಸ್ಥಳೀಯ ಟಿಎಂಸಿ ಶಾಸಕರೊಬ್ಬರ ಕೈವಾಡವಿದೆ ಎಂದು ಬಿಜೆಪಿ ಆರೋಪಿಸಿದರೆ, ರಾಜ್ಯದ ಆಡಳಿತ ಪಕ್ಷವು ಅದರ ಸತ್ಯಾಸತ್ಯತೆಯನ್ನು ಕಂಡುಹಿಡಿಯಲು ವೀಡಿಯೊವನ್ನು ಪರಿಶೀಲಿಸಬೇಕು ಎಂದು ಒತ್ತಾಯಿಸಿದೆ.
ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲಾ ಅವರು ಎಕ್ಸ್ ಪೋಸ್ಟ್ ಮಾಡಿ, ರಾಹುಲ್ ಗಾಂಧಿ ಮತ್ತು ಇತರ INDI ಬ್ಲಾಕ್ ನಾಯಕರು ಸಂತ್ರಸ್ತರನ್ನು ಭೇಟಿ ಮಾಡುತ್ತಾರೆಯೇ ಎಂದು ಕೇಳಿದ್ದಾರೆ. “ಮತ್ತೊಂದು ಬಂಗಾಳ ತಾಲಿಬಾನಿ ವೀಡಿಯೋ ಹೊರಬಿದ್ದಿದೆ, ಇದು ತೃಣಮೂಲ ಕಾಂಗ್ರೆಸ್ ನಾಯಕರಿಗೆ ಹತ್ತಿರವಿರುವ ವ್ಯಕ್ತಿಯಿಂದ ಮಹಿಳೆಯನ್ನು ಅಮಾನುಷವಾಗಿ ಥಳಿಸುತ್ತಿರುವುದನ್ನು ತೋರಿಸುತ್ತದೆ” ಎಂದು ಅವರು ಎಕ್ಸ್ನಲ್ಲಿ ಹೇಳಿದ್ದಾರೆ.
Another Horrific Talibani video from Bengal after Chopra talibani flogging by Tajmul ..
TMC means Talibani Mujhe Chahiye
A close associate of TMC MLA is thrashing a girl with his gang.
Will leader of hypocrisy Rahul Gandhi say a word or visit? What about INDI ALLIANCE… pic.twitter.com/4yoFn1ho8s
— Shehzad Jai Hind (Modi Ka Parivar) (@Shehzad_Ind) July 9, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.