ನವದೆಹಲಿ: ಆರ್ಥಿಕ ಸಂಬಂಧಗಳನ್ನು ಬಲಪಡಿಸುವ ಮಹತ್ವದ ಕ್ರಮದಲ್ಲಿ, ಭಾರತ ಮತ್ತು ರಷ್ಯಾವು 2030 ರ ವೇಳೆಗೆ USD 100 ಶತಕೋಟಿ ವಾರ್ಷಿಕ ವ್ಯಾಪಾರದ ಪ್ರಮಾಣವನ್ನು ಸಾಧಿಸುವ ಗುರಿಯನ್ನು ಹೊಂದಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಡುವಿನ ಶೃಂಗಸಭೆಯ ಮಾತುಕತೆಗಳ ಸಂದರ್ಭದಲ್ಲಿ ಈ ಮಹತ್ವಾಕಾಂಕ್ಷೆಯ ಗುರಿಯನ್ನು ನಿಗದಿಪಡಿಸಲಾಗಿದೆ.
ಮೋದಿ ರಷ್ಯಾ ಭೇಟಿಯ ವೇಳೆ ವಿವಿಧ ವಲಯಗಳಲ್ಲಿ ಸಹಕಾರವನ್ನು ಗಾಢಗೊಳಿಸುವ ಗುರಿಯನ್ನು ಹೊಂದಿರುವ ಒಂಬತ್ತು ಒಪ್ಪಂದಗಳಿಗೆ ಭಾರತ-ರಷ್ಯಾ ಸಹಿ ಹಾಕಿದೆ.
ಪ್ರಧಾನಿ ಮೋದಿಯವರ ಎರಡು ದಿನಗಳ ರಷ್ಯಾ ಭೇಟಿ, ಉಕ್ರೇನ್ ಯುದ್ಧದ ಆರಂಭದ ನಂತರದ ಮೊದಲನೆಯ ಭೇಟಿಯಾಗಿದೆ. ಅವರ ಭೇಟಿ ಆರ್ಥಿಕ ತೊಡಗಿಸಿಕೊಳ್ಳುವಿಕೆಯ ಮೇಲೆ ಹೆಚ್ಚು ಕೇಂದ್ರೀಕರಿಸಿತ್ತು.
ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ ಅವರು ‘ಮೇಕ್ ಇನ್ ಇಂಡಿಯಾ’ ಉಪಕ್ರಮಗಳನ್ನು ಉತ್ತೇಜಿಸುವುದು ಮತ್ತು ರಷ್ಯಾದಲ್ಲಿ ಭಾರತೀಯ ಸರಕುಗಳಿಗೆ ಮಾರುಕಟ್ಟೆ ಪ್ರವೇಶವನ್ನು ವಿಸ್ತರಿಸುವ ನಿಟ್ಟಿನಲ್ಲಿ ಮೋದಿ ಭೇಟಿ ಮಹತ್ವ ಪ್ರಭಾವ ಬೀರಿದೆ ಎಂದಿದ್ದಾರೆ.
ಶೃಂಗಸಭೆಯು ರಾಷ್ಟ್ರೀಯ ಕರೆನ್ಸಿಗಳನ್ನು ಬಳಸಿಕೊಂಡು ದ್ವಿಪಕ್ಷೀಯ ಪಾವತಿ ವ್ಯವಸ್ಥೆಯ ಪ್ರಾಮುಖ್ಯತೆಯನ್ನು ಒತ್ತಿಹೇಳಿತು ಮತ್ತು ಶಕ್ತಿಯಲ್ಲಿ ಹೆಚ್ಚಿನ ಸಹಯೋಗ, ವಿಶೇಷವಾಗಿ ಪರಮಾಣು ಶಕ್ತಿ ಮತ್ತು ತೈಲ ಸಂಸ್ಕರಣೆಯಂತಹ ಕ್ಷೇತ್ರಗಳಲ್ಲಿ ಸಹಯೋಗವನನು ಪುನರುಚ್ಛರಿಸಿತು. ಸೇವೆಗಳು ಮತ್ತು ಹೂಡಿಕೆಗಳಲ್ಲಿ ಮುಕ್ತ ವ್ಯಾಪಾರ ಒಪ್ಪಂದದ ಸಾಧ್ಯತೆಯನ್ನು ಅನ್ವೇಷಿಸಲು ಎರಡೂ ರಾಷ್ಟ್ರಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.