ವಿಯೆನ್ನಾ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ವಿಯೆನ್ನಾದ ಫೆಡರಲ್ ಚಾನ್ಸೆಲರಿಯಲ್ಲಿ ಆಸ್ಟ್ರಿಯಾದ ಚಾನ್ಸೆಲರ್ ಕಾರ್ಲ್ ನೆಹಮ್ಮರ್ ಅವರೊಂದಿಗೆ ನಿಯೋಗ ಮಟ್ಟದ ಮಾತುಕತೆ ನಡೆಸಿದರು.
ವಿದೇಶಾಂಗ ಸಚಿವ ಎಸ್ ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್ಎಸ್ಎ) ಅಜಿತ್ ದೋವಲ್, ವಿದೇಶಾಂಗ ಕಾರ್ಯದರ್ಶಿ ವಿನಯ್ ಮೋಹನ್ ಕ್ವಾತ್ರಾ ಮತ್ತು ಇತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಇದಕ್ಕೂ ಮೊದಲು ಆಸ್ಟ್ರಿಯಾದ ವಿಯೆನ್ನಾದಲ್ಲಿರುವ ಫೆಡರಲ್ ಚಾನ್ಸೆಲರಿಯಲ್ಲಿ ಪ್ರಧಾನಿ ಮೋದಿ ಅತಿಥಿ ಪುಸ್ತಕಕ್ಕೆ ಸಹಿ ಹಾಕಿದರು. ಅವರು ವಿಯೆನ್ನಾದ ಫೆಡರಲ್ ಚಾನ್ಸೆಲರಿಯಲ್ಲಿ ವಿಧ್ಯುಕ್ತ ಸ್ವಾಗತವನ್ನು ಪಡೆದರು. ಈ ವೇಳೆ ಕಾರ್ಲ್ ನೆಹಮ್ಮರ್ ಪ್ರಧಾನಿ ಮೋದಿ ಜೊತೆಗಿದ್ದರು.
“ದ್ವಿಪಕ್ಷೀಯ ಸಂಬಂಧಗಳಲ್ಲಿ ಹೊಸ ಅಧ್ಯಾಯವನ್ನು ಬರೆಯಲಾಗುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಆಸ್ಟ್ರಿಯಾದ ಚಾನ್ಸೆಲರ್ ಕರ್ಲ್ ನೆಹಮ್ಮರ್ ಅವರು ಫೆಡರಲ್ ಚಾನ್ಸರಿಯಲ್ಲಿ ಆತ್ಮೀಯವಾಗಿ ಸ್ವಾಗತಿಸಿದರು ಮತ್ತು ವಿಧ್ಯುಕ್ತ ಸ್ವಾಗತವನ್ನು ನೀಡಿದರು. 4 ದಶಕಗಳ ನಂತರ ಆಸ್ಟ್ರಿಯಾಕ್ಕೆ ಭಾರತೀಯ ಪ್ರಧಾನಿಯವರ ಈ ಮಹತ್ವದ ಭೇಟಿ ನಡೆಯುತ್ತಿದೆ” ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರರು ಎಕ್ಸ್ ಪೋಸ್ಟ್ ಮೂಲಕ ತಿಳಿಸಿದ್ದಾರೆ.
#WATCH | Prime Minister Narendra Modi signs the Guestbook at the Federal Chancellery in Vienna, Austria.
Austrian Chancellor Karl Nehammer also accompanies PM Modi. pic.twitter.com/2fy13meJQM
— ANI (@ANI) July 10, 2024
https://x.com/MEAIndia/status/1810962596775813339?ref_src=twsrc%5Etfw%7Ctwcamp%5Etweetembed%7Ctwterm%5E1810962596775813339%7Ctwgr%5E8252407534606f2fbf11e3de7a5a003e87942a17%7Ctwcon%5Es1_&ref_url=https%3A%2F%2Fwww.freepressjournal.in%2Fworld%2Fpm-modi-austrian-chancellor-karl-nehammer-hold-delegation-level-talks-in-vienna
https://x.com/narendramodi/status/1810745236437778478?ref_src=twsrc%5Etfw%7Ctwcamp%5Etweetembed%7Ctwterm%5E1810745236437778478%7Ctwgr%5E8252407534606f2fbf11e3de7a5a003e87942a17%7Ctwcon%5Es1_&ref_url=https%3A%2F%2Fwww.freepressjournal.in%2Fworld%2Fpm-modi-austrian-chancellor-karl-nehammer-hold-delegation-level-talks-in-vienna
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.