ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಖ್ಯಾತ ಶಟ್ಲರ್ ಸೈನಾ ನೆಹ್ವಾಲ್ ಅವರೊಂದಿಗೆ ಬ್ಯಾಡ್ಮಿಂಟನ್ ಆಡಿ ಎಲ್ಲರ ಗಮನವನ್ನು ಸೆಳೆದಿದ್ದಾರೆ. ರಾಷ್ಟ್ರಪತಿ ಭವನದ ಬ್ಯಾಡ್ಮಿಂಟನ್ ಕೋರ್ಟ್ನಲ್ಲಿ ಬುಧವಾರ ನಡೆದ ಈ ಆಟವು ಮುರ್ಮು ಅವರ ಕ್ರೀಡಾ ಉತ್ಸಾಹವನ್ನು ಪ್ರದರ್ಶಿಸಿದೆ.
“ರಾಷ್ಟ್ರಪತಿಗಳ ಸ್ಪೂರ್ತಿದಾಯಕ ನಡೆ ಭಾರತವು ಬ್ಯಾಡ್ಮಿಂಟನ್ ಪವರ್ ಹೌಸ್ ಆಗಿ ಹೊರಹೊಮ್ಮುವುದಕ್ಕೆ ಅನುಗುಣವಾಗಿದೆ, ಮಹಿಳಾ ಆಟಗಾರರು ವಿಶ್ವ ವೇದಿಕೆಯಲ್ಲಿ ಉತ್ತಮ ಪ್ರಭಾವ ಬೀರುತ್ತಿದ್ದಾರೆ” ಎಂದು ರಾಷ್ಟ್ರಪತಿ ಭವನ ಎಕ್ಸ್ನಲ್ಲಿ ಹಲವು ಫೋಟೋಗಳನ್ನು ಹಂಚಿಕೊಂಡಿದೆ.
ಮಹಿಳಾ ಪದ್ಮ ಪ್ರಶಸ್ತಿ ಪುರಸ್ಕೃತರನ್ನು ಒಳಗೊಂಡ ‘ಹರ್ ಸ್ಟೋರಿ – ಮೈ ಸ್ಟೋರಿ’ ಉಪನ್ಯಾಸ ಸರಣಿಯ ಭಾಗವಾಗಿ, ವಿಶ್ವ ನಂ.1 ಶ್ರೇಯಾಂಕವನ್ನು ತಲುಪಿದ ಮೊದಲ ಭಾರತೀಯ ಮಹಿಳಾ ಆಟಗಾರ್ತಿ ಸೈನಾ ನೆಹ್ವಾಲ್ ಗುರುವಾರ ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ಭಾಷಣ ಮತ್ತು ಸಭಿಕರೊಂದಿಗೆ ಸಂವಾದ ನಡೆಸಲಿದ್ದಾರೆ.
ರಾಷ್ಟ್ರಪತಿಗಳೊಂದಿಗೆ ಬ್ಯಾಡ್ಮಿಂಟನ್ ಆಡಿದ ಅನುಭವ ಮರೆಯಲಾಗದ್ದು ಎಂದು ಸೈನಾ ನೆಹ್ವಾಲ್ ಬಣ್ಣಿಸಿದ್ದಾರೆ. “ನನ್ನ ಜೀವನದ ಎಂತಹ ಸ್ಮರಣೀಯ ದಿನ. ನನ್ನೊಂದಿಗೆ ಬ್ಯಾಡ್ಮಿಂಟನ್ ಆಡಿದ್ದಕ್ಕಾಗಿ ರಾಷ್ಟ್ರಪತಿ ಮೇಡಂ ಅವರಿಗೆ ತುಂಬಾ ಧನ್ಯವಾದಗಳು” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.