ನವದೆಹಲಿ: 2025 ರ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಗಾಗಿ ಪಾಕಿಸ್ಥಾನಕ್ಕೆ ತೆರಳಲು ಭಾರತ ಒಪ್ಪದ ಕಾರಣ ಪಂದ್ಯ ಶ್ರೀಲಂಕಾ ಅಥವಾ ಯುಎಇಯಲ್ಲಿ ನಡೆಯಬಹುದು ಎಂದು ವರದಿಗಳು ಹೇಳುತ್ತಿವೆ.
ಶ್ರೀಲಂಕಾ ಅಥವಾ ದುಬೈನಲ್ಲಿ ಚಾಂಪಿಯನ್ಸ್ ಟ್ರೋಫಿ ನಡೆಸಲು ಭಾರತವು ಐಸಿಸಿಗೆ ಮನವಿ ಮಾಡುವ ಸಾಧ್ಯತೆಯಿದೆ. “ಭಾರತವು ಚಾಂಪಿಯನ್ಸ್ ಟ್ರೋಫಿ 2025 ಗಾಗಿ ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ. ದುಬೈ ಅಥವಾ ಶ್ರೀಲಂಕಾದಲ್ಲಿ ತನ್ನ ಪಂದ್ಯಗಳನ್ನು ನಡೆಸಲು ICC ಗೆ ಹೇಳುತ್ತದೆ” ಎಂದು BCCI ಮೂಲಗಳು ತಿಳಿಸಿವೆ.
ಭಾರತೀಯ ಕ್ರಿಕೆಟ್ ತಂಡದ ಪ್ರಯಾಣವನ್ನು ಕಡಿಮೆ ಮಾಡಲು ಒಂದೇ ನಗರದಲ್ಲಿ ಭಾರತದ ಎಲ್ಲಾ ಪಂದ್ಯಗಳನ್ನು ಆಯೋಜಿಸಲಾಗುವುದು ಎಂದು ಪಾಕಿಸ್ಥಾನ ಪ್ರಸ್ತಾಪಿಸಿದ ನಂತರವೂ ಭಾರತ ಅಲ್ಲಿಗೆ ಕ್ರಿಕೆಟ್ ಆಡಲು ತೆರಳದಿರಲು ನಿರ್ಧರಿಸಿದೆ.
ಭಾರತದ ಎಲ್ಲಾ ಪಂದ್ಯಗಳನ್ನು ಲಾಹೋರ್ನಲ್ಲಿ ನಡೆಸಲು ಮುಂದಾದರು ಭಾರತೀಯ ಮಂಡಳಿಯು ಪಾಕಿಸ್ತಾನಕ್ಕೆ ಪ್ರಯಾಣಿಸುವ ಬಗ್ಗೆ ಆಸಕ್ತಿ ಹೊಂದಿಲ್ಲ ಎನ್ನಲಾಗುತ್ತಿದೆ.
ICC ಚಾಂಪಿಯನ್ಸ್ ಟ್ರೋಫಿ ಫೆಬ್ರವರಿಯಿಂದ ಮಾರ್ಚ್ 2025 ರವರೆಗೆ ಪಾಕಿಸ್ತಾನದಲ್ಲಿ ನಿಗದಿಯಾಗಿದೆ. 2008 ರ ಏಷ್ಯಾ ಕಪ್ ನಂತರ, ಎರಡೂ ರಾಷ್ಟ್ರಗಳ ನಡುವಿನ ಉದ್ವಿಗ್ನ ಸಂಬಂಧಗಳಿಂದಾಗಿ ಭಾರತವು ಪಾಕಿಸ್ತಾನದಲ್ಲಿ ಯಾವುದೇ ಕ್ರಿಕೆಟ್ ಪಂದ್ಯಾವಳಿಗಳನ್ನು ಆಡಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.