ನವದೆಹಲಿ: ಜೂನ್ 25 ರಂದು ‘ಸಂವಿಧಾನ ಹತ್ಯಾ ದಿವಸ್’ ಎಂದು ಆಚರಿಸುವುದು ಸಂವಿಧಾನವನ್ನು ತುಳಿದು ಹಾಕಿದ ಸಂದರ್ಭದಲ್ಲಿ ಏನಾಯಿತು ಎಂಬುದನ್ನು ನೆನಪಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಎಕ್ಸ್ ಪೋಸ್ಟ್ ಮಾಡಿರುವ ಮೋದಿ, “ಸಂವಿಧಾನ್ ದಿವಸ್ ಆಚರಣೆ ತುರ್ತು ಪರಿಸ್ಥಿತಿಯ ಕಾರಣದಿಂದ ಬಳಲಿದ ಪ್ರತಿಯೊಬ್ಬ ವ್ಯಕ್ತಿಗೆ ಗೌರವ ಸಲ್ಲಿಸುವ ದಿನವಾಗಿದೆ, ಭಾರತೀಯ ಇತಿಹಾಸದ ಕರಾಳ ಘಟ್ಟವನ್ನು ಕಾಂಗ್ರೆಸ್ ತೆರೆಯಿತು” ಎಂದಿದ್ದಾರೆ.
1975 ರಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ ಜೂನ್ 25 ರಂದು ಅಮಾನವೀಯ ನೋವುಗಳನ್ನು ಸಹಿಸಿಕೊಂಡವರ ಬೃಹತ್ ಕೊಡುಗೆಗಳನ್ನು ಸ್ಮರಿಸಲು ‘ಸಂವಿಧಾನ ಹತ್ಯಾ ದಿವಸ್’ ಆಚರಿಸಲಾಗುವುದು ಎಂದು ಗೃಹ ಸಚಿವ ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಮೋದಿಯವರ ಪೋಸ್ಟ್ ಬಂದಿದೆ.
25 जून को #SamvidhaanHatyaDiwas देशवासियों को याद दिलाएगा कि संविधान के कुचले जाने के बाद देश को कैसे-कैसे हालात से गुजरना पड़ा था। यह दिन उन सभी लोगों को नमन करने का भी है, जिन्होंने आपातकाल की घोर पीड़ा झेली। देश कांग्रेस के इस दमनकारी कदम को भारतीय इतिहास के काले अध्याय के रूप… https://t.co/mzQFdQOxZW
— Narendra Modi (@narendramodi) July 12, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.