ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜಾಗತಿಕವಾಗಿ ಅತ್ಯಂತ ಜನಪ್ರಿಯ ಮತ್ತು ಅತಿಹೆಚ್ಚು ಅನುಯಾಯಿಗಳನ್ನು ಹೊಂದಿರುವ ನಾಯಕನಾಗಿ ಮುಂದುವರೆದಿದ್ದಾರೆ. ಅಮೆರಿಕಾದ ಅಧ್ಯಕ್ಷ ಜೋ ಬಿಡೆನ್, ಕೆನಡಾದ ಜಸ್ಟಿನ್ ಟ್ರುಡೋ ಸೇರಿದಂತೆ ಪ್ರಮುಖ ಜಾಗತಿಕ ನಾಯಕರನ್ನು ಅವರು ಹಿಂದಿಕ್ಕಿ ಎಕ್ಸ್ನಲ್ಲಿ ಅತಿಹೆಚ್ಚು ಫಾಲೋವರ್ಗಳನ್ನು ಹೊಂದಿರುವ ನಾಯನಾಗಿ ಮುಂದುವರೆದಿದ್ದಾರೆ.
X ನಲ್ಲಿ 100 ಮಿಲಿಯನ್ ಅನುಯಾಯಿಗಳನ್ನು ಮೀರಿಸುವ ಮೂಲಕ ಮಹತ್ವದ ಮೈಲಿಗಲ್ಲನ್ನು ಸಾಧಿಸಿರುವ ಮೋದಿಯವರು ಮೂರು ವರ್ಷಗಳಲ್ಲಿ ಸುಮಾರು 30 ಮಿಲಿಯನ್ ಅನುಯಾಯಿಗಳನ್ನು ತಮ್ಮ ಖಾತೆಗೆ ಸೇರಿಸಿಕೊಂಡಿರುವುದು ವಿಶೇಷ.
X ನಲ್ಲಿ ವಿಶ್ವದ ಅತಿ ಹೆಚ್ಚು ಹಿಂಬಾಲಕರನ್ನು ಹೊಂದಿರುವ ನಾಯಕ ಎಂಬ ಹೆಗ್ಗಳಿಕೆಯನ್ನು ಈಗಾಗಲೇ ಮೋದಿ ಹೊಂದಿದ್ದಾರೆ. 38.1 ಮಿಲಿಯನ್ ಅನುಯಾಯಿಗಳನ್ನು ಹೊಂದಿರುವ ಯುಎಸ್ ಅಧ್ಯಕ್ಷ ಜೋ ಬಿಡನ್ ಎರಡನೇ ಸ್ಥಾನದಲ್ಲಿ ಮುಂದುವರೆದಿದ್ದಾರೆ.
100 ಮಿಲಿಯನ್ ಅನುಯಾಯಿಗಳನ್ನು ತಲುಪಿದ ನಂತರ ಎಕ್ಸ್ ಪೋಸ್ಟ್ ಮಾಡಿರುವ ಮೋದಿ, ಸಂತೋಷವಾಗಿದೆ ಮತ್ತು ಚರ್ಚೆ, ಒಳನೋಟಗಳು, ಜನರ ಆಶೀರ್ವಾದಗಳು, ರಚನಾತ್ಮಕ ಟೀಕೆಗಳು ಮತ್ತು ಹೆಚ್ಚಿನದನ್ನು ಪ್ರೀತಿಸುತ್ತೇನೆ ಎಂದಿದ್ದಾರೆ. ಭವಿಷ್ಯದಲ್ಲಿಯೂ ಮತ್ತಷ್ಟು ತೊಡಗಿಸಿಕೊಳ್ಳುವ ಸಮಯವನ್ನು ಎದುರು ನೋಡುತ್ತಿದ್ದೇನೆ ಎಂದಿದ್ದಾರೆ.
ಮೈಕ್ರೋ ಬ್ಲಾಗಿಂಗ್ ಸೈಟ್ ಎಕ್ಸ್ ನಲ್ಲಿ 100 ಮಿಲಿಯನ್ ಫಾಲೋವರ್ ಮಾರ್ಕ್ ದಾಟಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಗೃಹ ಸಚಿವ ಅಮಿತ್ ಶಾ ಅಭಿನಂದಿಸಿದ್ದಾರೆ. ಸಾಮಾಜಿಕ ಜಾಲತಾಣದ ಪೋಸ್ಟ್ ನಲ್ಲಿ ಶಾ, ಜಗತ್ತೇ ಎದುರು ನೋಡುತ್ತಿರುವ ನಾಯಕ, ಮೋದಿ ಅವಿರೋಧವಾಗಿ ಉಳಿದಿದ್ದಾರೆ ಎಂದು ಹೇಳಿದ್ದಾರೆ. ಈ ಸಾಧನೆಯು ಭಾರತದಲ್ಲಿ ಮೋದಿಯವರ ಅಪ್ರತಿಮ ಜನಪ್ರಿಯತೆಗೆ ಮಾತ್ರವಲ್ಲದೆ ಜಾಗತಿಕ ವೇದಿಕೆಯಲ್ಲಿ ಅವರ ಅತ್ಯುನ್ನತ ರಾಜನೀತಿಗೆ ಸಾಕ್ಷಿಯಾಗಿದೆ ಎಂದು ಶಾ ಹೇಳಿದರು.
A hundred million on @X!
Happy to be on this vibrant medium and cherish the discussion, debate, insights, people’s blessings, constructive criticism and more.
Looking forward to an equally engaging time in the future as well. pic.twitter.com/Gcl16wsSM5
— Narendra Modi (@narendramodi) July 14, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.