ಕಠ್ಮಂಡು: ಕೆಪಿ ಶರ್ಮಾ ಓಲಿ ಅವರು ಇಂದು ನೇಪಾಳದ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅವರು ನಾಲ್ಕನೇ ಬಾರಿಗೆ ಪ್ರಧಾನಿ ಹುದ್ದೆಗೆ ಏರುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇವರಿಗೆ ಎಕ್ಸ್ ಮೋಸ್ಟ್ ಮೂಲಕ ಅಭಿನಂದನೆಗಳನ್ನು ತಿಳಿಸಿದ್ದಾರೆ.
“ನೇಪಾಳದ ಪ್ರಧಾನಿಯಾಗಿ ಆಯ್ಕೆಯಾದ ಕೆಪಿ ಶರ್ಮಾ ಓಲಿ ಅವರಿಗೆ ಅಭಿನಂದನೆಗಳು. ನಮ್ಮ ಎರಡು ದೇಶಗಳ ನಡುವಿನ ಸ್ನೇಹದ ಆಳವಾದ ಬಂಧಗಳನ್ನು ಮತ್ತಷ್ಟು ಬಲಪಡಿಸಲು ಮತ್ತು ನಮ್ಮ ಜನರ ಪ್ರಗತಿ ಮತ್ತು ಸಮೃದ್ಧಿಗಾಗಿ ನಮ್ಮ ಪರಸ್ಪರ ಪ್ರಯೋಜನಕಾರಿ ಸಹಕಾರವನ್ನು ಇನ್ನಷ್ಟು ವಿಸ್ತರಿಸಲು ನಿಕಟವಾಗಿ ಕೆಲಸ ಮಾಡಲು ಎದುರುನೋಡುತ್ತೇನೆ” ಎಂದಿದ್ದಾರೆ.
ನೇಪಾಳ ದೀರ್ಘ ಸಮಯದಿಂದ ರಾಜಕೀಯ ಸ್ಥಿರತೆಯ ಸವಾಲನ್ನು ಎದುರಿಸುತ್ತಿದೆ. ಶುಕ್ರವಾರ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ನಲ್ಲಿ ವಿಶ್ವಾಸ ಮತವನ್ನು ಕಳೆದುಕೊಂಡ ಪುಷ್ಪ ಕಮಲ್ ದಹಾಲ್ ‘ಪ್ರಚಂಡ’ ಅವರ ಸರ್ಕಾರ ವಿಸರ್ಜನೆಯಾಗಿ, 72 ವರ್ಷದ ಓಲಿ ನೇತೃತ್ವದ ಹೊಸ ಸರ್ಕಾರ ರಚನೆಯಾಗಿದೆ.
ಹೊಸ ಸಮ್ಮಿಶ್ರ ಸರ್ಕಾರವನ್ನು ಮುನ್ನಡೆಸಲು ನೇಪಾಳದ ಅತಿದೊಡ್ಡ ಕಮ್ಯುನಿಸ್ಟ್ ಪಕ್ಷದ ನಾಯಕನನ್ನು ಅಧ್ಯಕ್ಷ ರಾಮ್ ಚಂದ್ರ ಪೌಡೆಲ್ ಅವರು ನೇಪಾಳದ ಪ್ರಧಾನಿಯಾಗಿ ಭಾನುವಾರ ನೇಮಿಸಿದ್ದಾರೆ.
ಸಂಸತ್ತಿನಲ್ಲಿ ಅತಿದೊಡ್ಡ ಪಕ್ಷವಾದ ನೇಪಾಳಿ ಕಾಂಗ್ರೆಸ್ ಬೆಂಬಲದೊಂದಿಗೆ ಅವರು ಪ್ರಧಾನಿಯಾದರು.
ರಾಷ್ಟ್ರಪತಿ ಭವನದ ಮುಖ್ಯ ಕಟ್ಟಡವಾದ ಶೀತಲ್ ನಿವಾಸದಲ್ಲಿ ಅಧ್ಯಕ್ಷ ಪೌಡೆಲ್ ಅವರಿಂದ ಓಲಿ ಪ್ರಮಾಣ ವಚನ ಸ್ವೀಕರಿಸಿದರು.
ಸಾಂವಿಧಾನಿಕ ಆದೇಶದ ಪ್ರಕಾರ ನೇಮಕಗೊಂಡ 30 ದಿನಗಳಲ್ಲಿ ಒಲಿ ಅವರು ಸಂಸತ್ತಿನಲ್ಲಿ ವಿಶ್ವಾಸ ಮತವನ್ನು ಗಳಿಸಬೇಕಾಗಿದೆ. 275-ಆಸನಗಳ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ನಲ್ಲಿ ಓಲಿ ಅವರಿಗೆ ಕನಿಷ್ಠ 138 ಮತಗಳ ಅಗತ್ಯವಿದೆ.
Congratulations @kpsharmaoli on your appointment as the Prime Minister of Nepal. Look forward to working closely to further strengthen the deep bonds of friendship between our two countries and to further expand our mutually beneficial cooperation for the progress and prosperity…
— Narendra Modi (@narendramodi) July 15, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.