ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲಿ ಸಾಲು ಸಾಲು ಹಗರಣಗಳು ನಡೆಯುತ್ತಿವೆ. ಮಾತ್ರವಲ್ಲೇ ಕಾನೂನು ಸುವ್ಯವಸ್ಥೆ ಕೂಡ ಹದಗೆಡುತ್ತಿದೆ.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷದ ಸರ್ಕಾರದಡಿ ಕಳೆದ ಒಂದು ವರ್ಷದಲ್ಲಿ ಹಗರಣಗಳು ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ ಎಂದು ಬಿಜೆಪಿ ಇಂದು ಆರೋಪಿಸಿದೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಕ್ಷದ ಹಿರಿಯ ನಾಯಕಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ, ಮುಡಾದಿಂದ ಭೂ ಮಂಜೂರಾತಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದರು.
ಈ ಹಗರಣದಲ್ಲಿ ಸಿದ್ದರಾಮಯ್ಯ ಕೂಡ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ ಅವರು, ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಕರ್ನಾಟಕದಲ್ಲಿ ಎಸ್ಟಿ ಮತ್ತು ದಲಿತರ ಅಭಿವೃದ್ಧಿಗೆ ಮೀಸಲಾದ ಹಣವೂ ದುರುಪಯೋಗವಾಗಿದೆ ಎಂದು ಕರಂದ್ಲಾಜೆ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.