ಕೋಲ್ಕತ್ತಾ: ಪಶ್ಚಿಮ ಬಂಗಾಳದ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಕಳಪೆ ಪ್ರದರ್ಶನಕ್ಕೆ ಅಲ್ಪಸಂಖ್ಯಾತ ಸಮುದಾಯದ ಬೆಂಬಲದ ಕೊರತೆಯೇ ಕಾರಣ ಎಂದು ಬಿಜೆಪಿಯ ಹಿರಿಯ ನಾಯಕ ಸುವೇಂದು ಅಧಿಕಾರಿ ಮಂಗಳವಾರ ಹೇಳಿದ್ದಾರೆ. ಅಲ್ಲದೇ ‘ಸಬ್ಕಾ ಸಾಥ್, ಸಬ್ಕಾ ವಿಕಾಸ್’ ಅನಗತ್ಯ ಎಂದು ಪ್ರತಿಪಾದಿಸಿದ್ದಾರೆ ಮತ್ತು ಬದಲಿಗೆ ʼನಮ್ಮೊಂದಿಗೆ ಇರುವವರ ಜೊತೆ ನಾವಿದ್ದೇವೆʼ ಎಂಬ ಧ್ಯೇಯ ಅಳವಡಿಸಬೇಕು ಎಂದಿದ್ದಾರೆ.
ಬಿಜೆಪಿಯ ರಾಜ್ಯ ಕಾರ್ಯಕಾರಿ ಸಮಿತಿಯ ವಿಸ್ತೃತ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಅಧಿಕಾರಿ, ಪಕ್ಷದ ಅಲ್ಪಸಂಖ್ಯಾತ ಮೋರ್ಚಾದ ಅಗತ್ಯ ಇಲ್ಲ ಎಂದು ಪ್ರತಿಪಾದಿಸಿದ್ದಾರೆ.
ಹಿಂದೂ ಮತ್ತು ಸಂವಿಧಾನವನ್ನು ಉಳಿಸುವ ಹೋರಾಟ ಮುಂದುವರಿಯುತ್ತದೆ ಎಂದು ಅವರು ಹೇಳಿಕೊಂಡಿದ್ದು, ತನ್ನ ಕಾರ್ಯಕರ್ತರನ್ನು ಬೆಂಬಲಿಸುವಂತೆ ಒತ್ತಾಯಿಸಿದ್ದಾರೆ.
“ನಾನು ಮಾಡಬೇಕಾಗಿದ್ದನ್ನು ನಾನು ಈಗಾಗಲೇ ಹೇಳಿದ್ದೇನೆ. ಹೋರಾಟ ಮುಂದುವರಿಯುತ್ತದೆ. ನೀವೆಲ್ಲರೂ ನಮ್ಮೊಂದಿಗೆ ಸೇರುತ್ತೀರಾ? ನಾವು ಮೊದಲಿನಂತೆ ಒಟ್ಟಾಗಿ ಹೋರಾಡುತ್ತೇವೆ, ನಾವು ಗೆಲ್ಲುತ್ತೇವೆ. ನಾವು ಹಿಂದೂಗಳನ್ನು ಉಳಿಸುತ್ತೇವೆ, ನಾವು ಸಂವಿಧಾನವನ್ನು ಉಳಿಸುತ್ತೇವೆ” ಎಂದು ಅಧಿಕಾರಿ ಹೇಳಿದ್ದಾರೆ.
‘ಸಬ್ಕಾ ಸಾಥ್, ಸಬ್ಕಾ ವಿಕಾಸ್’ ಘೋಷಣೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ರಚಿಸಿದ್ದಾರೆ ಮತ್ತು ವಿವಿಧ ಪ್ರಚಾರಗಳಲ್ಲಿ ಬಿಜೆಪಿಯು ಜನಪ್ರಿಯಗೊಳಿಸಿದೆ.
ಇತ್ತೀಚೆಗೆ ನಡೆದ ವಿಧಾನಸಭಾ ಉಪಚುನಾವಣೆಯಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ಗೆ ಬಿಜೆಪಿ ಎಲ್ಲಾ ನಾಲ್ಕು ಸ್ಥಾನಗಳನ್ನು ಕಳೆದುಕೊಂಡಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.