ಮಂಗಳೂರು: ಭಾರಿ ಗುಡ್ಡ ಕುಸಿತದ ಪರಿಣಾಮವಾಗಿ ಮಂಗಳೂರು-ಬೆಂಗಳೂರು ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿರುವ ಹಿನ್ನೆಲೆಯಲ್ಲಿ ತುರ್ತಾಗಿ ಹೆಚ್ಚುವರಿ ರೈಲ್ವೆ ಸೇವೆ ಒದಗಿಸಬೇಕು ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ರೈಲ್ವೆಗೆ ಪತ್ರ ಮುಖೇನ ಮಾಡಿದ್ದ ಮನವಿಗೆ ಒಂದು ಗಂಟೆಯೊಳಗೆ ಸ್ಪಂದನೆ ದೊರೆತಿದೆ.
ವಿಪರೀತವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಮಂಗಳೂರನ್ನು ಕಲ್ಪಿಸುವ ಎರಡು ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಬ್ರಿಜೇಶ್ ಚೌಟ ಅವರು ನೈರುತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಮತ್ತು ಮೈಸೂರು ಡಿ ಆರ್ ಎಂ ಅವರಿಗೆ ಪತ್ರ ಬರೆದು, ಮಂಗಳೂರು ಮತ್ತು ಬೆಂಗಳೂರಿನ ನಡುವೆ ಹೆಚ್ಚುವರಿ ರೈಲು ಸೇವೆಯನ್ನು ತುರ್ತಾಗಿ ಆರಂಭಿಸಬೇಕು ಎಂದು ಮನವಿ ಮಾಡಿದ್ದಾರೆ.
ಸಂಸದರ ಮನವಿಗೆ ಸ್ಪಂದಿಸಿರುವ ಅಧಿಕಾರಿಗಳು, ಬೆಂಗಳೂರು ಮತ್ತು ಮಂಗಳೂರಿನ ನಡುವೆ ಎರಡು ಹೆಚ್ಚುವರಿ ರೈಲುಗಳ ಸಂಚಾರವನ್ನು ಘೋಷಿಸಿದ್ದಾರೆ.
ಉಭಯ ನಗರಗಳ ನಡುವೆ ಜನರ ಸಂಚಾರ ಹೆಚ್ಚು ಇರುವ ಹಿನ್ನೆಲೆಯಲ್ಲಿ ಸಂಸದರು ತೆಗೆದುಕೊಂಡ ತುರ್ತು ಕ್ರಮ ಕಠಿಣ ಪರಿಸ್ಥಿತಿಯಲ್ಲಿ ಜನರಿಗೆ ಸಾಕಷ್ಟು ಅನುಕೂಲಕರವಾಗಿ ಮಾರ್ಪಟ್ಟಿದೆ.
Gives me great satisfaction that, upon my request, an additional train will now run between Mangaluru-Bengaluru to facilitate passenger travel between the two cities as both roads on the Ghats are unavailable for movement with monsoon related landslides & other issues.
I thank… pic.twitter.com/53LDwVnwwa
— Captain Brijesh Chowta ಕ್ಯಾಪ್ಟನ್ ಬ್ರಿಜೇಶ್ ಚೌಟ (@CaptBrijesh) July 19, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.