ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲುಕ್ಸನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.
ಮಾತುಕತೆಯ ಸಂದರ್ಭದಲ್ಲಿ, ಮುಂಬರುವ ವರ್ಷಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ತಮ್ಮ ದೃಢ ಬದ್ಧತೆಯನ್ನು ಇಬ್ಬರೂ ನಾಯಕರು ಪುನರುಚ್ಚರಿಸಿದರು ಎಂದು ಮೂಲಗಳು ತಿಳಿಸಿವೆ.
ಉಭಯ ದೇಶಗಳ ನಡುವಿನ ಇತ್ತೀಚಿನ ಉನ್ನತ ಮಟ್ಟದ ಸಂಪರ್ಕಗಳಿಂದ ಉಂಟಾದ ಪ್ರಗತಿಯನ್ನು ಎತ್ತಿ ತೋರಿಸುತ್ತಾ, ವಿವಿಧ ಕ್ಷೇತ್ರಗಳಲ್ಲಿ ಪರಸ್ಪರ ಲಾಭದಾಯಕ ದ್ವಿಪಕ್ಷೀಯ ಸಹಕಾರವನ್ನು ಮುಂದುವರಿಸಲು ನಾಯಕರು ಒಪ್ಪಿಕೊಂಡರು. ಉಭಯ ದೇಶಗಳ ದ್ವಿಪಕ್ಷೀಯ ಸಹಕಾರ ವ್ಯಾಪಾರ ಮತ್ತು ಆರ್ಥಿಕ ಸಹಕಾರ, ಪಶುಸಂಗೋಪನೆ, ಔಷಧಗಳು, ಶಿಕ್ಷಣ ಮತ್ತು ಇತರವುಗಳನ್ನು ಒಳಗೊಂಡಿದೆ.
ನ್ಯೂಜಿಲೆಂಡ್ನಲ್ಲಿರುವ ಭಾರತೀಯ ವಲಸಿಗರ ಹಿತಾಸಕ್ತಿಗಳನ್ನು ನೋಡಿಕೊಳ್ಳುತ್ತಿರುವ ಲುಕ್ಸನ್ಗೆ ಪ್ರಧಾನಿ ಮೋದಿ ಧನ್ಯವಾದ ಹೇಳಿದರು. ಲುಕ್ಸನ್ ಅವರು ಅನಿವಾಸಿ ಭಾರತೀಯರ ಸುರಕ್ಷತೆ ಮತ್ತು ಯೋಗಕ್ಷೇಮದ ಕಡೆಗೆ ನಿರಂತರ ಪ್ರಯತ್ನಗಳ ಭರವಸೆ ನೀಡಿದರು.
I thank Prime Minister @Chrisluxonmp for his call and warm felicitations. Reiterated our firm commitment to take forward India-New Zealand ties, which are rooted in shared democratic values and people-to-people ties. Appreciate his efforts towards the security and well-being of…
— Narendra Modi (@narendramodi) July 20, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.