ಕಟಕ್: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಹಾಗೂ ಖ್ಯಾತ ಸಾವಯವ ಕೃಷಿಕ ಮಹಿಳೆ ಕಮಲಾ ಪೂಜಾರಿ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಶ್ರದ್ಧಾಂಜಲಿ ಸಲ್ಲಿಸಿ, ಕೃಷಿ ಕ್ಷೇತ್ರಕ್ಕೆ ಅವರ ಸ್ಮರಣಿಯ ಕೊಡುಗೆಯನ್ನು ಶ್ಲಾಘಿಸಿದ್ದಾರೆ.
ಪೂಜಾರಿ ಅವರ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
”ಅವರು ಕೃಷಿಗೆ ಸ್ಮರಣೀಯ ಕೊಡುಗೆಯನ್ನು ನೀಡಿದ್ದಾರೆ, ವಿಶೇಷವಾಗಿ ಸಾವಯವ ಕೃಷಿ ಪದ್ಧತಿಗಳನ್ನು ಉತ್ತೇಜಿಸುವುದು ಮತ್ತು ಸ್ಥಳೀಯ ಬೀಜಗಳನ್ನು ರಕ್ಷಿಸುವಲ್ಲಿ ಅವರ ಕೊಡುಗೆ ಅಪಾರ. ಸುಸ್ಥಿರತೆಯನ್ನು ಉತ್ಕೃಷ್ಟಗೊಳಿಸುವ ಮತ್ತು ಜೀವವೈವಿಧ್ಯತೆಯನ್ನು ರಕ್ಷಿಸುವಲ್ಲಿ ಅವರ ಕೆಲಸವು ವರ್ಷಗಳವರೆಗೆ ನೆನಪಿನಲ್ಲಿ ಉಳಿಯುತ್ತದೆ. ಬುಡಕಟ್ಟು ಸಮುದಾಯಗಳನ್ನು ಸಬಲೀಕರಣಗೊಳಿಸುವಲ್ಲಿ ಅವರು ದಾರಿದೀಪವಾಗಿದ್ದರು” ಎಂದು ಮೋದಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಕಮಲಾ ಪೂಜಾರಿ 74 ವರ್ಷ ವಯಸ್ಸಿನವರಾಗಿದ್ದರು ಮತ್ತು ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಕಿಡ್ನಿ ಸಂಬಂಧಿ ಕಾಯಿಲೆಯಿಂದ ಎರಡು ದಿನಗಳ ಹಿಂದೆ ಕಟಕ್ನ ಎಸ್ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಾಗಿದ್ದ ಅವರು ಶನಿವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
Pained by the passing away of Smt. Kamala Pujari Ji. She made a monumental contribution to agriculture, particularly boosting organic agricultural practices and protecting indigenous seeds. Her work in enriching sustainability and protecting biodiversity will be remembered for… pic.twitter.com/GUupabkQ9m
— Narendra Modi (@narendramodi) July 20, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.