
ನವದೆಹಲಿ: ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾದ 2025 ರ ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನವನ್ನು ಸಲ್ಲಿಸುವ ಪ್ರಕ್ರಿಯೆಯು ಈ ವರ್ಷದ ಸೆಪ್ಟೆಂಬರ್ 15 ರವರೆಗೆ ತೆರೆದಿರುತ್ತದೆ.
ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳು ಮತ್ತು ಶಿಫಾರಸುಗಳನ್ನು ಆನ್ಲೈನ್ನಲ್ಲಿ ರಾಷ್ಟ್ರೀಯ ಪುರಸ್ಕಾರ್ ಪೋರ್ಟಲ್ನಲ್ಲಿ ಸ್ವೀಕರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.
ಪದ್ಮ ವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಸೇರಿವೆ. 1954 ರಲ್ಲಿ ಸ್ಥಾಪಿಸಲಾದ ಈ ಪ್ರಶಸ್ತಿಗಳನ್ನು ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುತ್ತದೆ. ಈ ಪ್ರಶಸ್ತಿಯು ವಿಶಿಷ್ಟವಾದ ಕೆಲಸವನ್ನು ಮಾಡುವ ಮೂಲಕ ಮಹತ್ತರವಾದ ಸಾಧನೆ ಮಾಡಿದ ಸಾಧಕರಿಗೆ ನೀಡುವ ಗೌರವವಾಗಿದೆ.
ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜಕಾರ್ಯ, ವಿಜ್ಞಾನ ಮತ್ತು ಎಂಜಿನಿಯರಿಂಗ್, ಉದ್ಯಮಗಳಲ್ಲಿ ವಿಶಿಷ್ಟ ಮತ್ತು ಅಸಾಧಾರಣ ಸಾಧನೆಗಳಿಗಾಗಿ ಪದ್ಮ ಪ್ರಶಸ್ತಿ ನೀಡಲಾಗುತ್ತದೆ. ವೈದ್ಯರು ಮತ್ತು ವಿಜ್ಞಾನಿಗಳನ್ನು ಹೊರತುಪಡಿಸಿ ಪಿಎಸ್ಯುಗಳಲ್ಲಿ ಕೆಲಸ ಮಾಡುವವರು ಸೇರಿದಂತೆ ಸರ್ಕಾರಿ ನೌಕರರು ಪದ್ಮ ಪ್ರಶಸ್ತಿಗಳಿಗೆ ಅರ್ಹರಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


