ನವದೆಹಲಿ: ಹಿಂಸಾಚಾರ ಪೀಡಿತ ಬಾಂಗ್ಲಾದೇಶದ ‘ಅಸಹಾಯಕರಿಗೆ’ ಆಶ್ರಯ ನೀಡುವುದಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿಕೆಯನ್ನು ಬಾಂಗ್ಲಾ ಸರ್ಕಾರ ತೀವ್ರವಾಗಿ ಖಂಡಿಸಿದೆ ಮತ್ತು ಇದಕ್ಕೆ ಸಂಬಂಧಿಸಿದಂತೆ ಭಾರತ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಬಾಂಗ್ಲಾದೇಶ ಸರ್ಕಾರ ಮಂಗಳವಾರ ತಿಳಿಸಿದೆ
ಬಾಂಗ್ಲಾದೇಶ ವಿದೇಶಾಂಗ ಸಚಿವ ಹಸನ್ ಮಹಮೂದ್ ಅವರು ಮಮತಾ ಬ್ಯಾನರ್ಜಿಯವರ ಹೇಳಿಕೆಗಳು ಗೊಂದಲವನ್ನು ಉಂಟುಮಾಡಬಹುದು ಮತ್ತು ಜನರನ್ನು ದಾರಿ ತಪ್ಪಿಸಬಹುದು ಎಂದು ಹೇಳಿದ್ದಾರೆ.
“ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಗೌರವಪೂರ್ವಕವಾಗಿ ನಾನು ಹೇಳಲು ಬಯಸುವುದೇನೆಂದರೆ, ನಾವು ಅವರೊಂದಿಗೆ ಅತ್ಯುತ್ತಮ ಸಂಬಂಧವನ್ನು ಹೊಂದಿದ್ದೇವೆ. ಆಳವಾದ ಬಾಂಧವ್ಯವನ್ನು ಹೊಂದಿದ್ದೇವೆ. ಆದರೆ ಅವರ ಹೇಳಿಕೆಗಳು ಗೊಂದಲವನ್ನು ಸೃಷ್ಟಿಸಿವೆ ಮತ್ತು ದಾರಿತಪ್ಪಿಸುವ ಸಾಧ್ಯತೆಯಿದೆ” ಎಂದು ಹಸನ್ ಮಹಮೂದ್ ಹೇಳಿದ್ದಾರೆ.
ಕೋಲ್ಕತ್ತಾದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ)ಯ ವಾರ್ಷಿಕ ಹುತಾತ್ಮರ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ಮೀಸಲಾತಿ ವಿರುದ್ಧ ವಿದ್ಯಾರ್ಥಿಗಳ ನೇತೃತ್ವದ ಹಿಂಸಾತ್ಮಕ ಪ್ರತಿಭಟನೆಗಳಿಗೆ ಸಾಕ್ಷಿಯಾಗಿರುವ ಬಾಂಗ್ಲಾದೇಶದ ಜನರಿಗೆ ಆಶ್ರಯ ನೀಡಲು ಸಿದ್ಧ ಎಂದು ಹೇಳಿದ್ದಾರೆ. ಈ ಹೇಳಿಕೆ ಭಾರೀ ವಿವಾದ ಸೃಷ್ಟಿಸಿದೆ.
ಅವರ ಹೇಳಿಕೆಗಳನ್ನು ಪಶ್ಚಿಮ ಬಂಗಾಳದ ಗವರ್ನರ್ ಸಿವಿ ಆನಂದ ಬೋಸ್ ಅವರು ಟೀಕಿಸಿದ್ದು, ಅವರು ಪಶ್ಚಿಮ ಬಂಗಾಳ ಸರ್ಕಾರಕ್ಕೆ ಬಾಹ್ಯ ವ್ಯವಹಾರಗಳಿಗೆ ಸಂಬಂಧಿಸಿದ ವಿಷಯವನ್ನು ನಿರ್ವಹಿಸುವ ವಿಶೇಷ ಅಧಿಕಾರ ಇಲ್ಲ, ಅದು ಕೇಂದ್ರಕ್ಕೆ ಮಾತ್ರ ಇರುವುದು ಎಂದು ನೆನಪಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.