ಶ್ರೀನಗರ: ಜಮ್ಮು ವಿಭಾಗದಲ್ಲಿ 55 ಸಕ್ರಿಯ ಭಯೋತ್ಪಾದಕರನ್ನು ಗುರಿಯಾಗಿಸಿಕೊಂಡು ಸೇನೆ ಕಾರ್ಯಾಚರಣೆಗೆ ಇಳಿದಿದೆ. ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತೀಯ ಸೇನೆಯು ಆಪರೇಷನ್ ಸರ್ಪ್ ವಿನಾಶ್ 2.0 ಅನ್ನು ಪ್ರಾರಂಭಿಸಿದೆ. ಇದು ಕಳೆದ 21 ವರ್ಷಗಳಲ್ಲಿ ನಡೆದ ಅತಿದೊಡ್ಡ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಾಗಿದೆ ಮತ್ತು ಇದನ್ನು ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ಈ ಕಾರ್ಯಾಚರಣೆಯ ವರದಿಯನ್ನು ನೇರವಾಗಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಮತ್ತು ಸೇನಾ ಮುಖ್ಯಸ್ಥರಿಗೆ ಕಳುಹಿಸಲಾಗುತ್ತಿದೆ. ಕಳೆದ ಎರಡು ವರ್ಷಗಳಲ್ಲಿ ಜಮ್ಮುವಿನಲ್ಲಿ ಭಯೋತ್ಪಾದಕ ದಾಳಿಗಳ ತೀವ್ರ ಏರಿಕೆಗೆ ಈ ಕಾರ್ಯಾಚರಣೆಯು ಪ್ರತಿಕ್ರಿಯೆಯಾಗಿದೆ ಎಂದು ಹೇಳಲಾಗುತ್ತಿದೆ. ಕಳೆದ ಎರಡು ವರ್ಷಗಳಲ್ಲಿ 48 ಸೇನಾ ಸಿಬ್ಬಂದಿಗಳನ್ನು ಉಗ್ರ ದಾಳಿಗಳು ಬಲಿತೆಗೆದುಕೊಂಡಿವೆ.
ಭಯೋತ್ಪಾದಕ ಬೆದರಿಕೆಯನ್ನು ತಟಸ್ಥಗೊಳಿಸಲು ಸೇನೆಯು 200 ಸ್ನೈಪರ್ಗಳು ಮತ್ತು 500 ಪ್ಯಾರಾ ಕಮಾಂಡೋಗಳು ಸೇರಿದಂತೆ ಹೆಚ್ಚುವರಿ 3,000 ಸೈನಿಕರನ್ನು ನಿಯೋಜಿಸಿದೆ. ಇತರ ಭದ್ರತಾ ಏಜೆನ್ಸಿಗಳ ಸಹಯೋಗದೊಂದಿಗೆ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ ಮತ್ತು ಅದರ ಪ್ರಗತಿಯನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರ ಮತ್ತು ಸೇನಾ ಮುಖ್ಯಸ್ಥರಿಗೆ ನೇರವಾಗಿ ವರದಿ ಮಾಡಲಾಗುತ್ತಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.