ನವದೆಹಲಿ: ದೇಶಾದ್ಯಂತ 30 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 410 ವಿಶೇಷ POCSO ನ್ಯಾಯಾಲಯಗಳು ಸೇರಿದಂತೆ 755 ತ್ವರಿತ ವಿಶೇಷ ನ್ಯಾಯಾಲಯಗಳು ಕಾರ್ಯನಿರ್ವಹಿಸುತ್ತಿವೆ ಎಂದು ಸರ್ಕಾರ ಹೇಳಿದೆ.
ಗುರುವಾರ ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಈ ವಿಷಯ ತಿಳಿಸಿದ್ದಾರೆ.
ಅತ್ಯಾಚಾರ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಗೆ ಸಂಬಂಧಿಸಿದಂತೆ ತ್ವರಿತ ವಿಚಾರಣೆ ಮತ್ತು ಬಾಕಿ ಇರುವ ಪ್ರಕರಣಗಳ ಇತ್ಯರ್ಥಕ್ಕಾಗಿ ತ್ವರಿತಗತಿಯ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲು ಸರ್ಕಾರವು ಕೇಂದ್ರ ಪ್ರಾಯೋಜಿತ ಯೋಜನೆಯನ್ನು ಕಾಲಮಿತಿಯಲ್ಲಿ ಅನುಷ್ಠಾನಗೊಳಿಸುತ್ತಿದೆ ಎಂದು ಅವರು ಹೇಳಿದರು.
ಮೇಘವಾಲ್ ಅವರು, ಯೋಜನೆಯನ್ನು ಆರಂಭದಲ್ಲಿ ಒಂದು ವರ್ಷಕ್ಕೆ ಜಾರಿಗೊಳಿಸಲಾಯಿತು, ಇದನ್ನು ಈಗ 31 ಮಾರ್ಚ್ 2026 ರವರೆಗೆ 1952 ಕೋಟಿ ರೂ ವೆಚ್ಚದಲ್ಲಿ ವಿಸ್ತರಿಸಲಾಗಿದೆ, ಈ ವಿಶೇಷ ನ್ಯಾಯಾಲಯಗಳು ಇಲ್ಲಿಯವರೆಗೆ 2 ಲಕ್ಷದ 53 ಸಾವಿರ ಪ್ರಕರಣಗಳನ್ನು ವಿಲೇವಾರಿ ಮಾಡಿದೆ ಎಂದು ಸಚಿವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.