ಪಾಟ್ನಾ: ಪ್ರಧಾನಿ ನರೇಂದ್ರ ಮೋದಿಯವರನ್ನು ಚುನಾವಣಾ ಸಮಾವೇಶವೊಂದರಲ್ಲಿ ಕ್ರೂರಿ, ಸೈತಾನ್ ಎಂದೆಲ್ಲಾ ನಿಂದಿಸಿದ್ದ ಎಐಎಂಐಎಂ ಮುಖಂಡ ಅಸಾವುದ್ದೀನ್ ಓವೈಸಿಯ ಸಹೋದರ ಅಕ್ಬರುದ್ದೀನ್ ಓವೈಸಿಯ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿಗೊಳಿಸಲಾಗಿದೆ.
ಬಿಹಾರದ ಕಿಸಾನ್ಗಂಜ್ ಸುಪರಿಟೆಂಡೆಂಟ್ ಆಫ್ ಪೊಲೀಸ್ ರಾಜೀವ್ ರಂಜನ್ ಅವರು ಅವರು ಅಕ್ಬರುದ್ದೀನ್ ಬಂಧನಕ್ಕೆ ಆದೇಶಿಸಿದ್ದಾರೆ. ಸೋಮವಾರ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು.
ಸೆಕ್ಷನ್144ನ್ನು ಈತ ಉಲ್ಲಂಘಿಸಿದ್ದಾನೆ, ಐಪಿಸಿ ಸೆಕ್ಷನ್ 153ಎ ಮತ್ತು 188ಅನ್ವಯ ಪ್ರಕರಣ ದಾಖಲಿಸಲಾಗಿದೆ ಎಂದು ರಂಜನ್ ತಿಳಿಸಿದ್ದಾರೆ.
ಎಐಎಂಐಎಂ ಬಿಹಾರ ಚುನಾವಣೆಯಲ್ಲಿ ಆರು ಸ್ಥಾನಗಳಿಗೆ ಸ್ಪರ್ಧಿಸುತ್ತಿದ್ದು, ಓವೈಸಿ ಸಹೋದರರು ಅಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.