ನವದೆಹಲಿ: ಪ್ರಧಾನಮಂತ್ರಿ ಆವಾಸ್ ಯೋಜನೆ- ನಗರ ಪ್ರದೇಶದಡಿ ಇದುವರೆಗೆ ಒಟ್ಟು 1 ಕೋಟಿ 18 ಲಕ್ಷ ಮನೆಗಳನ್ನು ಮಂಜೂರು ಮಾಡಲಾಗಿದೆ ಎಂದು ಸರ್ಕಾರ ಹೇಳಿದೆ.
ಇಂದು ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ ವಸತಿ ಮತ್ತು ನಗರ ವ್ಯವಹಾರಗಳ ರಾಜ್ಯ ಸಚಿವ ತೋಖಾನ್ ಸಾಹು ಈ ವಿಷಯ ತಿಳಿಸಿದ್ದಾರೆ. ಒಟ್ಟು ಮಂಜೂರಾದ ಮನೆಗಳ ಪೈಕಿ ಒಂದು ಕೋಟಿ 14 ಲಕ್ಷ ಲಕ್ಷಕ್ಕೂ ಹೆಚ್ಚು ಮನೆಗಳ ನಿರ್ಮಾಣಕ್ಕೆ ಗ್ರೌಂಡಿಂಗ್ ಮಾಡಲಾಗಿದ್ದು, 85 ಲಕ್ಷಕ್ಕೂ ಹೆಚ್ಚು ಮನೆಗಳು ಪೂರ್ಣಗೊಂಡಿವೆ ಎಂದು ಹೇಳಿದರು.
ದೇಶದಾದ್ಯಂತ ಎಲ್ಲಾ ಅರ್ಹ ನಗರ ಫಲಾನುಭವಿಗಳಿಗೆ ಮೂಲಭೂತ ನಾಗರಿಕ ಸೌಕರ್ಯಗಳೊಂದಿಗೆ ಪಕ್ಕಾ ಮನೆಗಳನ್ನು ಒದಗಿಸಲು 2015 ರಿಂದ ಯೋಜನೆಯಡಿಯಲ್ಲಿ ಕೇಂದ್ರದ ನೆರವು ನೀಡುವ ಮೂಲಕ ಸಚಿವಾಲಯವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರಯತ್ನಗಳಿಗೆ ಪೂರಕವಾಗಿದೆ ಎಂದು ಸಾಹು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.