ತಿರುವನಂತಪುರಂ: ಕೇರಳದ ವಯನಾಡಿನ ಕೆಲವು ಭಾಗಗಳಲ್ಲಿ ಭೂಕುಸಿತ ಸಂಭವಿಸಿ ಭಾರೀ ಅನಾಹುತ ಸೃಷ್ಟಿಯಾಗಿದೆ. ಅನೇಕರು ಅವಶೇಷಗಳಡಿ ಸಿಲುಕಿರುವ ಶಂಕೆ ಇದೆ. ಇದುವರೆಗೆ 20ಕ್ಕೂ ಅಧಿಕ ಮಂದಿಯ ಸಾವಿನ ಲೆಕ್ಕ ದೊರೆತಿದೆ. ಈ ನಡುವೆ ಕೇಂದ್ರದಿಂದ ಸಾಧ್ಯವಿರುವ ಎಲ್ಲ ನೆರವು ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಕೇರಳ ಸರ್ಕಾರಕ್ಕೆ ಭರವಸೆ ನೀಡಿದ್ದಾರೆ.
“ವಯನಾಡಿನ ಕೆಲವು ಭಾಗಗಳು ಭೂಕುಸಿತದಿಂದ ಸಂಕಷ್ಟಕ್ಕೀಡಾಗಿದೆ. ನನ್ನ ಆಲೋಚನೆಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರೆಲ್ಲರ ಜೊತೆಯಲ್ಲಿವೆ ಮತ್ತು ಗಾಯಗೊಂಡವರಿಗಾಗಿ ಪ್ರಾರ್ಥನೆಗಳು. ಎಲ್ಲಾ ಸಂತ್ರಸ್ತರಿಗೆ ಸಹಾಯ ಮಾಡಲು ಪ್ರಸ್ತುತ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಕೇರಳ ಸಿಎಂ ಪಿನರಾಯಿ ವಿಜಯನ್ ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಅಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕೇಂದ್ರದಿಂದ ಸಾಧ್ಯವಿರುವ ಎಲ್ಲ ಸಹಾಯವನ್ನು ಭರವಸೆ ನೀಡಿದ್ದೇನೆ” ಎಂದು ಪ್ರಧಾನಿ ಮೋದಿ ಅವರು ಎಕ್ಸ್ ಪೋಸ್ಟ್ ಮಾಡಿದ್ದಾರೆ.
ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಭಾರಿ ಭೂಕುಸಿತಗಳು ಸಂಭವಿಸಿದ್ದು, ನೂರಾರು ಜನರು ಸಿಲುಕಿರುವ ಭೀತಿಯಿದೆ. ಭಾರೀ ಭೂಕುಸಿತದಲ್ಲಿ ಈವರೆಗೆ 20ಕ್ಕೂ ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
Distressed by the landslides in parts of Wayanad. My thoughts are with all those who have lost their loved ones and prayers with those injured.
Rescue ops are currently underway to assist all those affected. Spoke to Kerala CM Shri @pinarayivijayan and also assured all possible…
— Narendra Modi (@narendramodi) July 30, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.