ಬೈರುತ್: ಲೆಬನಾನ್ನಲ್ಲಿ ಯುದ್ಧ ಪರಿಸ್ಥಿತಿ ಇರುವುದರಿಂದ ಆ ದೇಶಕ್ಕೆ ಅನಿವಾರ್ಯವಲ್ಲದ ಭೇಟಿಯನ್ನು ತಪ್ಪಿಸಬೇಕು ಎಂದು ಭಾರತೀಯ ರಾಯಭಾರ ಕಚೇರಿಯು ಭಾರತೀಯರಿಗೆ ಸಲಹೆ ನೀಡಿದೆ. ಅಲ್ಲದೇ ಈಗಾಗಲೇ ಅಲ್ಲಿರುವ ಭಾರತೀಯರು ಎಚ್ಚರಿಕೆ ವಹಿಸಬೇಕು, ಚಲನೆಯನ್ನು ನಿರ್ಬಂಧಿಸಬೇಕು ಮತ್ತು ಬೈರುತ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸದಾ ಸಂಪರ್ಕದಲ್ಲಿರಬೇಕು ಎಂದು ಹೇಳಿದೆ.
ಲೆಬನಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಎಕ್ಸ್ ಪೋಸ್ಟ್ ಮಾಡಿದ್ದು, “ಈ ಪ್ರದೇಶದಲ್ಲಿನ ಇತ್ತೀಚಿನ ಅಶಾಂತಿಯ ದೃಷ್ಟಿಯಿಂದ, ಲೆಬನಾನ್ಗೆ ಅನಿವಾರ್ಯವಲ್ಲದ ಪ್ರಯಾಣವನ್ನು ತಪ್ಪಿಸಲು ಭಾರತೀಯ ಪ್ರಜೆಗಳಿಗೆ ಸೂಚಿಸಲಾಗಿದೆ. ಲೆಬನಾನ್ನಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳಿಗೆ ಎಚ್ಚರಿಕೆ ವಹಿಸಲು ತಿಳಿಸಲಾಗಿದೆ. ಬೈರುತ್ನಲ್ಲಿರುವ ಭಾರತದ ರಾಯಭಾರ ಕಚೇರಿಯ ಇಮೇಲ್ ಐಡಿ: cons.beirut@mea.gov.in ಅಥವಾ ತುರ್ತು ದೂರವಾಣಿ ಸಂಖ್ಯೆ 96176860128 ಆಗಿದ್ದು, ಇದರ ಮೂಲಕ ಸಂಪರ್ಕದಲ್ಲಿರಲು ಸಲಹೆ ನೀಡುತ್ತೇವೆ” ಎಂದಿದೆ.
ಗೋಲನ್ ಹೈಟ್ಸ್ನಲ್ಲಿ ನಡೆದ ರಾಕೆಟ್ ದಾಳಿಯ ನಂತರ ಉದ್ವಿಗ್ನತೆ ಮತ್ತಷ್ಟು ಉಲ್ಬಣಗೊಂಡಿದೆ, ಹೆಜ್ಬುಲ್ಲಾ ನಡೆಸಿದ ಈ ದಾಳಿಯಲ್ಲಿ 12 ಮಕ್ಕಳು ಹತರಾಗಿದ್ದಾರೆ. ಗೋಲನ್ ಹೈಟ್ಸ್ನಲ್ಲಿ ನಡೆದ ದಾಳಿಗೆ ಪ್ರತಿಕ್ರಿಯೆಯಾಗಿ, ಇಸ್ರೇಲ್ ರಕ್ಷಣಾ ಪಡೆಗಳು ಮಂಗಳವಾರ ದಕ್ಷಿಣ ಲೆಬನಾನ್ನಲ್ಲಿ ನಡೆಸಿದ ದಾಳಿಯಲ್ಲಿ ಉನ್ನತ ಹಿಜ್ಬುಲ್ಲಾ ಕಮಾಂಡರ್ ಫುವಾಡ್ ಶುಕ್ರ್ ಕೊಲ್ಲಲ್ಪಟ್ಟಿದ್ದಾನೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.