ಮಂಗಳೂರು: ರೈಲ್ವೆ ಸಚಿವಾಲಯವು ಮಂಗಳೂರು ಮತ್ತು ಬೆಂಗಳೂರು ನಡುವಿನ ಪ್ರಯಾಣಿಕರ ಅನುಕೂಲಕ್ಕಾಗಿ ಮಂಗಳೂರು – ಯಶವಂತಪುರ ಎಕ್ಸ್ಪ್ರೆಸ್ ರೈಲಿನ ಸಮಯಗಳಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿದೆ.
ಈ ಬಗ್ಗೆ ದಕ್ಷಿಣಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಎಕ್ಸ್ ಪೋಸ್ಟ್ ಮೂಲಕ ಮಾಹಿತಿ ನೀಡಿದ್ದು, ರೈಲು ಸಂಖ್ಯೆ 16576 ಮಂಗಳೂರು ಜಂಕ್ಷನ್ – ಯಶವಂತಪುರ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ನ ಸಮಯಗಳಲ್ಲಿ ಬಹು ನಿರೀಕ್ಷಿತ ಬದಲಾವಣೆಯನ್ನು ನಮ್ಮ ರೈಲ್ವೆ ಸಚಿವಾಲಯವು ಮಂಗಳೂರು-ಬೆಂಗಳೂರು ನಡುವಿನ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚು ಸುಗಮಗೊಳಿಸಿದೆ ಎಂದು ತಿಳಿಸಲು ಸಂತೋಷವಾಗುತ್ತಿದೆ ಎಂದಿದ್ದಾರೆ.
ರೈಲ್ವೇ ಸಚಿವಾಲಯಕ್ಕೆ ಬರೆದ ಮೊದಲ ಪತ್ರದಲ್ಲಿಯೇ ಈ ಬಗ್ಗೆ ಮನವಿ ಮಾಡಲಾಗಿತ್ತು, ಬಹುಕಾಲದಿಂದ ಬಾಕಿ ಉಳಿದಿರುವ ಬೇಡಿಕೆಯನ್ನು ಈಡೇರಿಸಿರುವುದು ನನಗೆ ಅತೀವ ತೃಪ್ತಿ ನೀಡಿದೆ ಎಂದಿದ್ದಾರೆ.
ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ರೈಲ್ವೇ ಸಚಿವ ಅಶ್ವಿನ್ ವೈಷ್ಣವ್, ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಸಂಸದರು ಧನ್ಯವಾದಗಳನ್ನು ಅರ್ಪಿಸಿದ್ದಾರೆ.
Pleased to inform that the much awaited change in timings for Train No. 16576 Mangaluru Jn – Yesvantpur Tri-Weekly Express has been facilitated by our Ministry of Railways much to the convenience of passengers between Mlore & Blore.
Having pursued this & appealed to our Ministry… pic.twitter.com/G6yP5O30dX
— Captain Brijesh Chowta ಕ್ಯಾಪ್ಟನ್ ಬ್ರಿಜೇಶ್ ಚೌಟ (@CaptBrijesh) August 1, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.