ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ವಿಯೆಟ್ನಾಂ ಪ್ರಧಾನಿ ಫಾಮ್ ಮಿನ್ ಚಿನ್ ಅವರು ಇಂದು ದೆಹಲಿಯ ಹೈದರಾಬಾದ್ ಹೌಸ್ನಲ್ಲಿ ಸಭೆ ನಡೆಸಿದರು. ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ ಸೇರಿದಂತೆ ಭಾರತ-ವಿಯೆಟ್ನಾಂ ಬಾಂಧವ್ಯವನ್ನು ಮತ್ತಷ್ಟು ಶಕ್ತಿಯುತಗೊಳಿಸಲು ಉಭಯ ನಾಯಕರು ಚರ್ಚೆ ನಡೆಸಿದ್ದಾರೆ.
ಮಾತುಕತೆಯ ನಂತರ, ಇಬ್ಬರೂ ನಾಯಕರು ವಿಯೆಟ್ನಾಂನ ನ್ಹಾ ಟ್ರಾಂಗ್ನಲ್ಲಿರುವ ದೂರಸಂಪರ್ಕ ವಿಶ್ವವಿದ್ಯಾಲಯದಲ್ಲಿ ಆರ್ಮಿ ಸಾಫ್ಟ್ವೇರ್ ಪಾರ್ಕ್ ಅನ್ನು ವರ್ಚುವಲ್ ಆಗಿ ಉದ್ಘಾಟಿಸಿದರು. ಇದು ಭಾರತ ಮತ್ತು ವಿಯೆಟ್ನಾಂ ನಡುವಿನ ಸಹಯೋಗದ ಯೋಜನೆಯಾಗಿದೆ. ಭಾರತವು ಯೋಜನೆಗೆ ಐದು ಮಿಲಿಯನ್ ಡಾಲರ್ ಅನುದಾನವನ್ನು ನೀಡಿದೆ.
ಬಳಿಕ ಉಭಯ ನಾಯಕರ ಸಮ್ಮುಖದಲ್ಲಿ ಕಸ್ಟಮ್ಸ್ ಸಾಮರ್ಥ್ಯ ನಿರ್ಮಾಣ, ಕೃಷಿ ಸಂಶೋಧನೆ ಮತ್ತು ಶಿಕ್ಷಣ, ಕಡಲ ಪರಂಪರೆ, ಔಷಧೀಯ ಸಸ್ಯ ಮತ್ತು ಕಾನೂನು ಕ್ಷೇತ್ರಗಳಲ್ಲಿ ಸಹಕಾರಕ್ಕಾಗಿ ಎರಡೂ ಕಡೆಯವರು ಸಹಿ ಮತ್ತು ವಿನಿಮಯ ಒಪ್ಪಂದಗಳಿಗೆ ಸಹಿ ಹಾಕಿದರು.
ಇದಕ್ಕೂ ಮುನ್ನ ರಾಜ್ಘಾಟ್ನಲ್ಲಿ ಮಹಾತ್ಮ ಗಾಂಧೀಜಿ ಸ್ಮಾರಕಕ್ಕೆ ವಿಯೆಟ್ನಾಂ ಪ್ರಧಾನಿ ಶ್ರದ್ಧಾಂಜಲಿ ಸಲ್ಲಿಸಿದರು.
ಭಾರತಕ್ಕೆ ಮೂರು ದಿನಗಳ ಪ್ರವಾಸದಲ್ಲಿರುವ ಫಾಮ್ ಮಿನ್ ಚಿನ್ಹ್ ಅವರಿಗೆ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ವಿಧ್ಯುಕ್ತ ಸ್ವಾಗತವನ್ನು ನೀಡಲಾಯಿತು. ವಿಯೆಟ್ನಾಂ ಪ್ರಧಾನಿಯನ್ನು ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ಮೋದಿ ಬರಮಾಡಿಕೊಂಡರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.