ನವದೆಹಲಿ: ಏಪ್ರಿಲ್ 2021 ರಿಂದ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಅಡಿಯಲ್ಲಿ ಸರ್ಕಾರವು ಒಂದು ಲಕ್ಷದ ಮೂರು ಸಾವಿರ ಕಿಲೋಮೀಟರ್ ಉದ್ದದ ರಸ್ತೆಗಳನ್ನು ನಿರ್ಮಿಸಿದೆ ಎಂದು ಕೇಂದ್ರ ಸರ್ಕಾರ ಇಂದು ಮಾಹಿತಿ ನೀಡಿದೆ.
ಇದನ್ನು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಇಂದು ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ಈ ವಿಷಯ ತಿಳಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ 16 ಸಾವಿರ ಕಿಲೋಮೀಟರ್ ಉದ್ದದ ರಸ್ತೆಯನ್ನು ನಿರ್ಮಿಸಲಾಗಿದೆ ಮತ್ತು ಮಧ್ಯಪ್ರದೇಶದಲ್ಲಿ 9295 ಕಿಲೋಮೀಟರ್ ಉದ್ದವನ್ನು ನಿರ್ಮಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಇದೇ ಅವಧಿಯಲ್ಲಿ ದೇಶದ ಒಟ್ಟು 17,949 ರಸ್ತೆಗಳು ಮತ್ತು 3509 ಸೇತುವೆಗಳನ್ನು ಈ ಯೋಜನೆಯಡಿ ನಿರ್ಮಿಸಲಾಗಿದೆ ಎಂದು ಅವರು ಹೇಳಿದರು.
25 ಸಾವಿರ ಗ್ರಾಮೀಣ ವಾಸಸ್ಥಳಗಳಿಗೆ ಎಲ್ಲಾ ಹವಾಮಾನ ಸಂಪರ್ಕವನ್ನು ಒದಗಿಸಲು ಯೋಜನೆಯ ನಾಲ್ಕನೇ ಹಂತವನ್ನು ಪ್ರಾರಂಭಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.