ನವದೆಹಲಿ: ಮಕ್ಕಳಿಗಾಗಿ ಪಿಎಂ ಕೇರ್ಸ್ ಯೋಜನೆಯಡಿ 4532 ಮಕ್ಕಳು ಪ್ರಯೋಜನ ಪಡೆದಿದ್ದಾರೆ ಎಂದು ಕೇಂದ್ರ ಸರ್ಕಾರ ಮಾಹಿತಿಯನ್ನು ನೀಡಿದೆ.
ಇಂದು ಲೋಕಸಭೆಯಲ್ಲಿ ಲಿಖಿತ ಉತ್ತರ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ ಅವರು ಮಹಾರಾಷ್ಟ್ರದಿಂದ ಗರಿಷ್ಠ 855 ಮಕ್ಕಳು ಯೋಜನೆಯಡಿಯಲ್ಲಿ ಪ್ರಯೋಜನ ಪಡೆದಿದ್ದಾರೆ, ನಂತರ ಉತ್ತರ ಪ್ರದೇಶದ 467 ಮತ್ತು ಮಧ್ಯಪ್ರದೇಶದಲ್ಲಿ 433 ಮಕ್ಕಳು ಪ್ರಯೋಜನ ಪಡೆದುಕೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
2020ರ ಮಾರ್ಚ್ 11ರಿಂದ ಅನ್ವಯವಾಗುವಂತೆ ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಪೋಷಕರಿಬ್ಬರನ್ನು ಅಥವಾ ಕಾನೂನಾತ್ಮಕ ಪಾಲಕರನ್ನು ಅಥವಾ ದತ್ತು ಪಡೆದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಬೆಂಬಲ ನೀಡಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು 2021 ಮೇ 29 ರಂದು ಮಕ್ಕಳಿಗಾಗಿ ಪಿಎಂ ಕೇರ್ಸ್ ಯೋಜನೆಗೆ ಚಾಲನೆ ನೀಡಿದರು.
ಮಕ್ಕಳ ಸಮಗ್ರ ರಕ್ಷಣೆ ಮತ್ತು ನಿರಂತರ ರಕ್ಷಣೆಯನ್ನು ಖಾತ್ರಿಪಡಿಸುವುದು ಮತ್ತು ಆರೋಗ್ಯ ವಿಮೆಯ ಮೂಲಕ ಅವರ ಯೋಗಕ್ಷೇಮವನ್ನು ನೋಡಿಕೊಳ್ಳುವುದು, ಶಿಕ್ಷಣದ ಮೂಲಕ ಅವರನ್ನು ಸಬಲೀಕರಣಗೊಳಿಸುವುದು ಮತ್ತು 23ನೇ ವಯಸ್ಸಿಗೆ ಬಂದ ನಂತರ ಆರ್ಥಿಕ ಬೆಂಬಲದೊಂದಿಗೆ ಸ್ವಾವಲಂಬಿ ಬದುಕಿಗಾಗಿ ಅವರನ್ನು ಸಜ್ಜುಗೊಳಿಸುವುದು ಪಿಎಂ ಕೇರ್ಸ್ ಯೋಜನೆಯ ಉದ್ದೇಶವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.