ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎಲ್ಲಾ ನಾಗರಿಕರಲ್ಲಿ ಹರ್ ಘರ್ ತಿರಂಗಾ ಅಭಿಯಾನದ ಆಂದೋಲನವನ್ನು ಮತ್ತಷ್ಟು ಉತ್ತೇಜಿಸಲು ಮತ್ತೆ ಅದೇ ಹಿಂದಿನ ಉತ್ಸಾಹದಿಂದ ಭಾಗವಹಿಸುವಂತೆ ಮನವಿ ಮಾಡಿದ್ದಾರೆ.
ಎಕ್ಸ್ ಪೋಸ್ಟ್ ಮಾಡಿರುವ ಅಮಿತ್ ಶಾ ಅವರು, ಆಗಸ್ಟ್ 9 ರಿಂದ 15 ರ ನಡುವೆ ತಮ್ಮ ಮನೆಗಳಲ್ಲಿ ತಿರಂಗಾ ಪ್ರದರ್ಶಿಸುವಂತೆ ಅಥವಾ ಹಾರಿಸುವಂತೆ ಕೇಳಿಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಹರ್ ಘರ್ ತಿರಂಗ ಅಭಿಯಾನ ಕಳೆದ ಎರಡು ವರ್ಷಗಳಿಂದ ರಾಷ್ಟ್ರೀಯ ಆಂದೋಲನವಾಗಿ ರೂಪುಗೊಂಡಿದೆ ಎಂದಿರುವ ಅಮಿತ್ ಶಾ, ಇದು ರಾಷ್ಟ್ರದ ಉದ್ದಗಲಕ್ಕೂ ಇರುವ ಪ್ರತಿಯೊಬ್ಬ ಭಾರತೀಯನಲ್ಲೂ ಮೂಲಭೂತ ಏಕತೆಯನ್ನು ಜಾಗೃತಗೊಳಿಸುತ್ತಿದೆ ಎಂದರು.
ತಿರಂಗಾದ ಜೊತೆ ಸೆಲ್ಫಿ ತೆಗೆದುಕೊಂಡು ಅದನ್ನು ಹರ್ ಘರ್ ತಿರಂಗ ವೆಬ್ಸೈಟ್ – harghartiranga.com ನಲ್ಲಿ ಅಪ್ಲೋಡ್ ಮಾಡುವಂತೆ ಶಾ ಜನರಿಗೆ ಮನವಿ ಮಾಡಿದ್ದಾರೆ.
PM Shri @narendramodi Ji's #HarGharTiranga campaign has evolved into a national movement over the last two years, awakening the basic unity in every Indian across the length and breadth of the nation.
I appeal to all citizens to bolster this movement further and participate in…
— Amit Shah (@AmitShah) August 3, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.