ಅಯೋಧ್ಯಾ: ಅಯೋಧ್ಯೆ ಅತ್ಯಾಚಾರ ಪ್ರಕರಣದ ಆರೋಪಿ ಸಮಾಜವಾದಿ ಮುಖಂಡನ ವಿರುದ್ಧ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಬುಲ್ಡೋಜರ್ ಕ್ರಮಕೈಗೊಂಡಿದೆ. ಸಂತ್ರಸ್ತೆಯ ತಾಯಿಯನ್ನು ಭೇಟಿಯಾಗಿ ನ್ಯಾಯದ ಭರವಸೆ ನೀಡಿದ ಒಂದು ದಿನದ ನಂತರ, ಅಯೋಧ್ಯೆಯಲ್ಲಿ 12 ವರ್ಷದ ಬಾಲಕಿಯ ಸಾಮೂಹಿಕ ಅತ್ಯಾಚಾರದ ಪ್ರಮುಖ ಆರೋಪಿಯ ಒಡೆತನದ ಬೇಕರಿಯನ್ನು ಶನಿವಾರ ಕೆಡವಲಾಯಿತು.
ಡ್ರೋನ್ ತಂತ್ರಜ್ಞಾನ ಬಳಸಿ ಭಾರೀ ಪೊಲೀಸ್ ಕಣ್ಗಾವಲಿನಲ್ಲಿ ‘ಬುಲ್ಡೋಜರ್ ಆಕ್ಷನ್’ ನಡೆಸಲಾಗಿದೆ.
ಜುಲೈ 30 ರಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಕರಿ ಮಾಲೀಕ ಮೊಯಿದ್ ಖಾನ್ ಮತ್ತು ಅವನ ಉದ್ಯೋಗಿ ರಾಜು ಖಾನ್ ಅವರನ್ನು ಪುರಕಲಂದರ್ ಪ್ರದೇಶದಿಂದ ಬಂಧಿಸಲಾಯಿತು. ಪೊಲೀಸ್ ಮೂಲಗಳ ಪ್ರಕಾರ, ಇಬ್ಬರು ಎರಡು ತಿಂಗಳ ಹಿಂದೆ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾರೆ ಮತ್ತು ಕೃತ್ಯವನ್ನು ಮರೆಮಾಚಿದ್ದಾರೆ ಇತ್ತೀಚೆಗೆ ನಡೆಸಿದ ವೈದ್ಯಕೀಯ ಪರೀಕ್ಷೆಯಲ್ಲಿ ಸಂತ್ರಸ್ತೆ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಾಗ ಅಪರಾಧ ಬಯಲಾಗಿದೆ.
ಅತ್ಯಾಚಾರದ ದೃಶ್ಯವನ್ನು ವಿಡಿಯೋ ರೆಕಾರ್ಡ್ ಮಾಡಿದ್ದಾರೆ ಮತ್ತು ಆಕೆಯನ್ನು ಬೆದರಿಸಿದ್ದಾರೆ ಎಂದು ಅಯೋಧ್ಯೆಯ ಎಸ್ಎಸ್ಪಿ ರಾಜ್ ಕರಣ್ ನಯ್ಯರ್ ಅವರು ಬಹಿರಂಗಪಡಿಸಿದ್ದಾರೆ.
ಲಕ್ನೋದಲ್ಲಿನ ಅವರ ಅಧಿಕೃತ ನಿವಾಸದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿಯಾದ ನಂತರ ಸಂತ್ರಸ್ತೆಯ ತಾಯಿ ಮಾಧ್ಯಮಗಳೊಂದಿಗೆ ಮಾತನಾಡಿ, “ಅಪರಾಧಿಗೆ ಬುಲ್ಡೋಜರ್ ಕ್ರಮ ಮತ್ತು ಅನುಕರಣೀಯ ಶಿಕ್ಷೆಯಾಗುತ್ತದೆ ಎಂದು ಸಿಎಂ ಭರವಸೆ ನೀಡಿದ್ದಾರೆ” ಎಂದಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.