ನವದೆಹಲಿ: ದೇಶದಲ್ಲಿ ನಡೆಯುತ್ತಿರುವ ದಾಖಲೆಯ ಅನಿಲ ಉತ್ಪಾದನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ ಮತ್ತು ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪವನ್ನು ಸಾಧಿಸುವಲ್ಲಿ ಇಂಧನ ಕ್ಷೇತ್ರದಲ್ಲಿ ಸ್ವಾವಲಂಬನೆ ಬಹಳ ಮುಖ್ಯ ಎಂದು ಪ್ರತಿಪಾದಿಸಿದ್ದಾರೆ.
ಅನಿಲ ಉತ್ಪಾದನೆ ಕ್ಷೇತ್ರದಲ್ಲಿ ದೇಶವು ಹೊಸ ದಾಖಲೆಯನ್ನು ಸಾಧಿಸಿದೆ ಎಂದು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಪೋಸ್ಟ್ಗೆ ಪ್ರತಿಕ್ರಿಯೆಯಾಗಿ ಮೋದಿ ಈ ಹೇಳಿಕೆ ನೀಡಿದ್ದಾರೆ.
2020-21 ರಲ್ಲಿ ಅನಿಲ ಉತ್ಪಾದನೆಯು 28.7 BCM ಆಗಿತ್ತು ಮತ್ತು 2023-24 ರಲ್ಲಿ 36.43 BCM ಗೆ ಏರಿತು. 2026 ರಲ್ಲಿ ಅನಿಲ ಉತ್ಪಾದನೆಯು 45.3 BCM ಆಗಲಿದೆ ಎಂದು ಕೇಂದ್ರ ಸಚಿವರು ಹಂಚಿಕೊಂಡ ಮಾಹಿತಿಯು ಅಂದಾಜು ಮಾಡಿದೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಮೋದಿ, ಈ ಸಾಧನೆಗಾಗಿ ದೇಶದ ಜನತೆಗೆ ಅಭಿನಂದನೆಗಳು ಎಂದು ಹೇಳಿದ್ದಾರೆ. ಅನಿಲ ಉತ್ಪಾದನೆಯಲ್ಲಿನ ಈ ದಾಖಲೆಯು ಈ ದಿಕ್ಕಿನಲ್ಲಿ ನಮ್ಮ ಬದ್ಧತೆಗೆ ನೇರ ಪುರಾವೆಯಾಗಿದೆ ಎಂದು ಅವರು ಬಣ್ಣಿಸಿದ್ದಾರೆ.
देशवासियों को इस उपलब्धि के लिए बहुत-बहुत बधाई!
विकसित भारत के संकल्प की सिद्धि में ऊर्जा के क्षेत्र में हमारी आत्मनिर्भरता बहुत महत्वपूर्ण है। गैस उत्पादन का यह रिकॉर्ड इस दिशा में हमारी प्रतिबद्धता का प्रत्यक्ष प्रमाण है। https://t.co/czlrxvTFJt
— Narendra Modi (@narendramodi) August 4, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.