ಢಾಕಾ: ಬಾಂಗ್ಲಾದೇಶದಲ್ಲಿ ರಾಜಕೀಯ ಪರಿಸ್ಥಿತಿ ಹದಗೆಟ್ಟಿತ್ತು ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ಅವರು ರಾಜೀನಾಮೆಯನ್ನು ನೀಡಿದ್ದಾರೆ. ಮಿಲಿಟರಿಯ ಆದೇಶದಂತೆ ಅವರು ಪಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಮತ್ತು ಸುರಕ್ಷಿತ ಸ್ಥಳಕ್ಕೆ ಹಾರಿದ್ದಾರೆ ಎಂದು ವರದಿಗಳು ಹೇಳುತ್ತಿವೆ.
ಈ ನಡುವೆ ಹಿಂಸಾಚಾರವನ್ನು ಕೊನೆಗೊಳಿಸಿ, ನಿಮ್ಮ ಬೇಡಿಕೆಗಳನ್ನು ಈಡೇರಿಸುತ್ತೇನೆ ಎಂದು ಬಾಂಗ್ಲಾದೇಶದ ಸೇನಾ ಮುಖ್ಯಸ್ಥ ವಾಕರ್-ಉಜ್-ಜಮಾನ್ ಸೋಮವಾರ ಪ್ರತಿಭಟನಾಕಾರರನ್ನು ಉದ್ದೇಶಿಸಿ ಹೇಳಿದ್ದಾರೆ. ಅಲ್ಲದೇ, ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ಹಿನ್ನೆಲೆಯಲ್ಲಿ ಮಧ್ಯಂತರ ಸರ್ಕಾರವನ್ನು ರಚಿಸುವುದಾಗಿ ಹೇಳಿದ್ದಾರೆ.
“ನಾವು ಮಧ್ಯಂತರ ಸರ್ಕಾರವನ್ನು ರಚಿಸುತ್ತೇವೆ” ಎಂದು ರಾಜ್ಯ ದೂರದರ್ಶನದಲ್ಲಿ ರಾಷ್ಟ್ರಕ್ಕೆ ಪ್ರಸಾರ ಮಾಡಿದ ವಿಡಿಯೋದಲ್ಲಿ ವಾಕರ್ ಹೇಳಿದರು, ಶೇಖ್ ಹಸೀನಾ ರಾಜೀನಾಮೆ ನೀಡಿದ್ದಾರೆ. ಮುಂದೆಯೂ ತಮ್ಮ ಬೇಡಿಕೆಗಳನ್ನು ಈಡೇರಿಸುವುದಾಗಿ ಪ್ರತಿಭಟನಾಕಾರರಿಗೆ ಭರವಸೆ ನೀಡಿದ್ದಾರೆ.
2009 ರಿಂದ ಬಾಂಗ್ಲಾದೇಶವನ್ನು ಆಳುತ್ತಿರುವ ಹಸೀನಾ ಅವರು ಪಿಎಂ ಹುದ್ದೆಯಿಂದ ಕೆಳಗಿಳಿಯಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟು ಸಾವಿರಾರು ಮಂದಿ ಬಾಂಗ್ಲಾದ ಬೀದಿಗಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ಹಿಂಸೆಗೆ ತಿರುಗಿರುವ ಹಿನ್ನೆಲೆಯಲ್ಲ ಇದುವರೆಗೆ 300ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಭಾನುವಾರದಿಂದ ಸುಮಾರು 100 ಜನರು ಸಾವನ್ನಪ್ಪಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.