ಕೋಲ್ಕತ್ತಾ: ಬಾಂಗ್ಲಾದೇಶದಲ್ಲಿ ರಾಜಕೀಯ ಅಶಾಂತಿಯ ನಡುವೆ ಪ್ರತಿಕ್ರಿಯೆ ನೀಡಿರುವ ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರು, ಮುಂದಿನ ಕೆಲವೇ ದಿನಗಳಲ್ಲಿ ನೆರೆಯ ದೇಶದಿಂದ ಸುಮಾರು ಒಂದು ಕೋಟಿ ಹಿಂದೂ ನಿರಾಶ್ರಿತರು ಪಶ್ಚಿಮಬಂಗಾಳವನ್ನು ಪ್ರವೇಶಿಸಬಹುದು ಎಂದು ಹೇಳಿದ್ದಾರೆ.
ವಿಧಾನಸಭೆಯ ಮುಂಗಾರು ಅಧಿವೇಶನದ ನೇಪಥ್ಯದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅಧಿಕಾರಿ, ಬಾಂಗ್ಲಾದೇಶದಿಂದ ಒಂದು ಕೋಟಿ ಹಿಂದೂ ನಿರಾಶ್ರಿತರ ಪ್ರವೇಶಕ್ಕೆ ಪಶ್ಚಿಮ ಬಂಗಾಳದ ಜನರು ಸಿದ್ಧರಾಗಿರಬೇಕು ಎಂದಿದ್ದಾರೆ.
“ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಹತ್ಯೆ ಮಾಡಲಾಗುತ್ತಿದೆ. ರಂಗ್ಪುರ ನಗರ ಪರಿಷತ್ತಿನ ಕೌನ್ಸಿಲರ್ ಹರದನ್ ನಾಯಕ್ ಅವರನ್ನು ಹತ್ಯೆ ಮಾಡಲಾಗಿದೆ. ಸಿರಾಜ್ಗಂಜ್ನಲ್ಲಿ 13 ಪೊಲೀಸರನ್ನು ಹತ್ಯೆ ಮಾಡಲಾಗಿದೆ, ಅವರಲ್ಲಿ ಒಂಬತ್ತು ಮಂದಿ ಹಿಂದೂಗಳು” ಎಂದಿದ್ದಾರೆ.
“ನೊವಾಖಾಲಿಯಲ್ಲಿರುವ ಹಿಂದೂ ನಿವಾಸಗಳಿಗೆ ಬೆಂಕಿ ಹಚ್ಚಲಾಗಿದೆ” ಎಂದು ಅಧಿಕಾರಿ ಹೇಳಿದ್ದಾರೆ. “ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿ ಸ್ಪಷ್ಟವಾಗಿ ಹೇಳಿರುವುದರಿಂದ ಕೇಂದ್ರ ಸರ್ಕಾರದೊಂದಿಗೆ ಮಾತನಾಡಲು ನಾನು ರಾಜ್ಯಪಾಲ ಸಿ.ವಿ. ಆನಂದ ಬೋಸ್ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ವಿನಂತಿಸಲು ಬಯಸುತ್ತೇನೆ. ಸಿಎಎ ಬಾಂಗ್ಲಾದೇಶದಲ್ಲಿ ಯಾವುದೇ ವ್ಯಕ್ತಿಯು ಧಾರ್ಮಿಕ ಹಿಂಸಾಚಾರಕ್ಕೆ ಬಲಿಯಾದರೆ ನಾವು ಅವರಿಗೆ ಅಗತ್ಯ ಆಶ್ರಯವನ್ನು ನೀಡಬೇಕು ಎಂದು ಪ್ರತಿಪಾದಿಸುತ್ತದೆ” ಎಂದು ಅಧಿಕಾರಿ ಹೇಳಿದ್ದಾರೆ.
ಮುಂದಿನ ಮೂರು ದಿನಗಳಲ್ಲಿ ಬಾಂಗ್ಲಾದೇಶದ ಪ್ರಸ್ತುತ ಪರಿಸ್ಥಿತಿ ಬದಲಾಗದಿದ್ದರೆ, ಬಾಂಗ್ಲಾದೇಶವು ಮೂಲಭೂತವಾದಿ ಶಕ್ತಿಗಳ ಹಿಡಿತಕ್ಕೆ ಬರಲಿದೆ ಎಂದ ಅವರು , ಒಂದು ಕೋಟಿ ಹಿಂದೂ ನಿರಾಶ್ರಿತರಿಗೆ ಆಶ್ರಯ ನೀಡಲು ಮಾನಸಿಕವಾಗಿ ಸಿದ್ಧರಾಗಿರಿ. ನಾನು ಅದಕ್ಕಾಗಿ ಸಿದ್ಧನಿದ್ದೇನೆ ಎಂದಿದ್ದಾರೆ. ಅಲ್ಲದೇ 1971 ರಲ್ಲಿ ಮಾಡಿದಂತೆ ಬಾಂಗ್ಲಾದೇಶದಿಂದ ಬರುವ ಹಿಂದೂ ನಿರಾಶ್ರಿತರಿಗೆ ಆಶ್ರಯ ನೀಡುವಂತೆ ಅವರು ಪಶ್ಚಿಮ ಬಂಗಾಳದ ಹಿಂದೂ ಜನಸಂಖ್ಯೆಗೆ ಮನವಿ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.