ನವದೆಹಲಿ: ಶೇಖ್ ಹಸೀನಾ ಸರ್ಕಾರದ ಪತನ ಮತ್ತು ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ನೆರೆಯ ಬಾಂಗ್ಲಾದೇಶದ ಆಡಳಿತವನ್ನು ಸೇನೆ ಸ್ವಾಧೀನಪಡಿಸಿಕೊಂಡಿದೆ. ಈ ಎಲ್ಲಾ ಬೆಳವಣಿಗೆಳನ್ನು ಭಾರತ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಈ ಕುರಿತು ಚರ್ಚಿಸಲು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಇಂದು ಸರ್ವಪಕ್ಷಗಳ ಸಭೆ ನಡೆಸಿದರು.
ಹಿಂಸಾಚಾರ ಪೀಡಿತ ರಾಷ್ಟ್ರದ ಪರಿಸ್ಥಿತಿ ಮತ್ತು ಈ ಪರಿಸ್ಥಿತಿಯ ಸಂಭಾವ್ಯ ಭದ್ರತೆ, ಆರ್ಥಿಕ ಮತ್ತು ರಾಜತಾಂತ್ರಿಕ ಪರಿಣಾಮಗಳನ್ನು ಪರಿಹರಿಸಲು ಭಾರತ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಜೈಶಂಕರ್ ಅವರು ಎಲ್ಲಾ ಪಕ್ಷಗಳ ನಾಯಕರಿಗೆ ವಿವರಿಸಿದರು.
ದೇಶಭ್ರಷ್ಟಗೊಂಡು ಭಾರತಕ್ಕೆ ಆಗಮಿಸಿರುವ ಶೇಖ್ ಹಸೀನಾ ಅವರಿಗೆ ಆಶ್ರಯ ನೀಡುವುದರಿಂದ ಉದ್ಭವಿಸಬಹುದಾದ ಪರಿಣಾಮ ಮತ್ತು ಕೇಂದ್ರದ ಇತರ ಕಾರ್ಯತಂತ್ರದ ಬಗ್ಗೆ ವಿದೇಶಾಂಗ ಸಚಿವರು ಚರ್ಚಿಸಿದ್ದಾರೆ ಎಂದು ಮೂಲಗಳು ಹೇಳುತ್ತಿವೆ
“ಇದು ಚಾಲ್ತಿಯಲ್ಲಿರುವ ಪರಿಸ್ಥಿತಿಯ ಬಗ್ಗೆ ಸರ್ಕಾರವು ಸರಿಯಾದ ಸಮಯದಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳುತ್ತದೆ” ಎಂದು ಜೈಶಂಕರ್ ಸಂಸದರಿಗೆ ತಿಳಿಸಿದರು.
ಪ್ರಸ್ತುತ ದೆಹಲಿಯಲ್ಲಿರುವ ಶೇಖ್ ಹಸೀನಾ ಅವರಿಗೆ ಅವರ ಮುಂದಿನ ಯೋಜನೆಗಳ ಬಗ್ಗೆ ಕೇಂದ್ರಕ್ಕೆ ತಿಳಿಸಲು ಸಾಕಷ್ಟು ಸಮಯ ನೀಡಲು ಬಯಸುತ್ತೇವೆ ಎಂದು ಜೈಶಂಕರ್ ಹೇಳಿದ್ದಾರೆ.
ಸರ್ಕಾರವು ವಿಕಸನಗೊಳ್ಳುತ್ತಿರುವ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ ಮತ್ತು ಹಸೀನಾ ಅವರ ಪದಚ್ಯುತ ನಂತರ ಮಧ್ಯಂತರ ಸರ್ಕಾರವನ್ನು ರಚಿಸಲು ಸಜ್ಜಾಗಿರುವ ಬಾಂಗ್ಲಾದೇಶ ಸೇನೆಯೊಂದಿಗೆ ಸಂಪರ್ಕದಲ್ಲಿದೆ. ಭಾರತೀಯ ಪ್ರಜೆಗಳು ಮತ್ತು ನೆರೆಯ ರಾಜ್ಯದಲ್ಲಿನ ಅಲ್ಪಸಂಖ್ಯಾತರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಬದ್ಧವಾಗಿದೆ ಎಂದು ಜೈಶಂಕರ್ ಹೇಳಿದ್ದಾರೆ.
ಜೈಶಂಕರ್ ಅವರಲ್ಲದೆ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಕೂಡ ಸಭೆಯಲ್ಲಿ ಭಾಗವಹಿಸಿದ್ದರು.
https://x.com/DrSJaishankar/status/1820688949305597964?ref_src=twsrc%5Etfw%7Ctwcamp%5Etweetembed%7Ctwterm%5E1820688949305597964%7Ctwgr%5E6b2f136681b91a68a4b28f99337cb5cf5254ad62%7Ctwcon%5Es1_&ref_url=https%3A%2F%2Fwww.ndtv.com%2Findia-news%2Fsheikh-hasina-bangladesh-protests-rahul-gandhi-s-jaishankar-rahul-gandhis-pak-question-at-meeting-on-bangladesh-s-jaishankars-reply-6274003
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.