ನವದೆಹಲಿ: ಪ್ರತಿ ವರ್ಷ ಆಗಸ್ಟ್ 7 ರಂದು ರಾಷ್ಟ್ರೀಯ ಕೈಮಗ್ಗ ದಿನವನ್ನ ಆಚರಣೆ ಮಾಡಲಾಗುತ್ತದೆ. 2015 ರಲ್ಲಿ ಮೊದಲ ಬಾರಿಗೆ ಈ ಆಚರಣೆ ಆರಂಭವಾಯಿತು. 1905ರ ಸ್ವದೇಶಿ ಚಳವಳಿಯ ಸವಿನೆನಪಿಗಾಗಿ ಆಗಸ್ಟ್ 7 ರಂದು ‘ರಾಷ್ಟ್ರೀಯ ಕೈಮಗ್ಗ ದಿನ’ವನ್ನಾಗಿ ಕೇಂದ್ರ ಸರ್ಕಾರ ಆಚರಿಸಿತು.
ಈ ದಿನವನ್ನು ಗುರುತಿಸಲು, ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಅವರು ತಮ್ಮ ಪತ್ನಿ ಸುನಿತಾ ಧಂಖರ್ ಅವರೊಂದಿಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ಆಯೋಜಿಸಲಾಗುತ್ತಿರುವ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ಕೈಮಗ್ಗ ಕ್ಷೇತ್ರದಲ್ಲಿ ಹೊಸ ಉತ್ಪನ್ನಗಳನ್ನು ಆವಿಷ್ಕರಿಸಿದವರಿಗೆ ಸಂತ ಕಬೀರ್ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ. 2015 ರಿಂದ ಈ ಪ್ರಶಸ್ತಿಯನ್ನು ನೀಡುತ್ತಾ ಬರಲಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಕೈ ಮಗ್ಗ ದಿನದ ಶುಭಾಶಯಗಳನ್ನು ತಿಳಿಸಿದ್ದಾರೆ. ಎಕ್ಸ್ ಪೋಸ್ಟ್ ಮಾಡಿರುವ ಮೋದಿ ಅವರು, ದೇಶಾದ್ಯಂತದ ಕೈಮಗ್ಗದ ಶ್ರೀಮಂತ ಪರಂಪರೆ ಮತ್ತು ರೋಮಾಂಚಕ ಸಂಪ್ರದಾಯದ ಬಗ್ಗೆ ಅಪಾರ ಹೆಮ್ಮೆಪಡುತ್ತೇನೆ ಎಂದು ಹೇಳಿದ್ದಾರೆ. ರಾಷ್ಟ್ರವು ದೇಶದ ಕುಶಲಕರ್ಮಿಗಳ ಪ್ರಯತ್ನಗಳನ್ನು ಗೌರವಿಸುತ್ತದೆ ಮತ್ತು ‘ಸ್ಥಳೀಯರಿಗೆ ಧ್ವನಿಯಾಗುವ’ ತನ್ನ ಬದ್ಧತೆಯನ್ನು ಪುನರುಚ್ಚರಿಸುತ್ತದೆ ಎಂದಿದ್ದಾರೆ.
Greetings on National Handloom Day! We take immense pride in the rich heritage and vibrant tradition of handlooms across our nation. We also cherish the efforts of our artisans and reiterate our commitment to be ‘Vocal for Local.’ pic.twitter.com/5M0LPxPFgr
— Narendra Modi (@narendramodi) August 7, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.