ನವದೆಹಲಿ: ಪ್ಯಾರಿಸ್ ಒಲಿಂಪಿಕ್ 2024ರಲ್ಲಿ ಭಾರತಕ್ಕೆ ಚಿನ್ನದ ಪದಕದ ಭರವಸೆ ಮೂಡಿಸಿದ್ದ ಕುಸ್ತಿಪಟು ವಿನೇಶ್ ಫೋಗಟ್ ಅವರು ತೂಕದ ಕಾರಣಕ್ಕೆ ಸ್ಪರ್ಧೆಯಿಂದ ಅನರ್ಹಗೊಂಡಿದ್ದಾರೆ. ಈ ಮೂಲಕ ಭಾರತದ ಬಂಗಾರ ಜಯಿಸುವ ಒಂದು ಅವಕಾಶ ಕೈತಪ್ಪಿ ಹೋಗಿದೆ.
ಸ್ಪರ್ಧೆ ಅನುಮತಿಸುವ ಮಿತಿಗಳಿಗಿಂತ ಸುಮಾರು 100 ಗ್ರಾಂಗಳಷ್ಟು ಅಧಿಕ ತೂಕ ಹೊಂದಿದ್ದಾರೆಂದು ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಅನರ್ಹಗೊಳಿಸಲಾಗಿದೆ. ಮಹಿಳೆಯರ ಫ್ರೀ ಸ್ಟೈಲ್ 50 ಕೆಜಿ ಕುಸ್ತಿ ಸ್ಪರ್ಧೆಯ ಫೈನಲ್ಗೂ ಮುನ್ನ ಈ ಬೆಳವಣಿಗೆ ನಡೆದಿದೆ.
“ಫೋಗಟ್ ಅನರ್ಹ ಸುದ್ದಿಯನ್ನು ಭಾರತೀಯ ತಂಡವು ವಿಷಾದದಿಂದ ಹಂಚಿಕೊಳ್ಳುತ್ತದೆ. ರಾತ್ರಿಯಿಡೀ ತಂಡದ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ, ಇಂದು ಬೆಳಿಗ್ಗೆ 50 ಕೆಜಿಗಿಂತ ಕೆಲವು ಗ್ರಾಂಗಳಷ್ಟು ಹೆಚ್ಚು ತೂಕವನ್ನು ಹೊಂದಿದ ಕಾರಣಕ್ಕೆ ಅನರ್ಹರಾಗಿದ್ದಾರೆ. ಈ ಸಮಯದಲ್ಲಿ ತಂಡ ಯಾವುದೇ ಹೆಚ್ಚಿನ ಕಾಮೆಂಟ್ ನೀಡುವುದಿಲ್ಲ. ವಿನೇಶ್ ಅವರ ಖಾಸಗಿತನವನ್ನು ಗೌರವಿಸುವಂತೆ ವಿನಂತಿಸುತ್ತೇವೆ” ಎಂದು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಹೇಳಿದೆ.
ಪ್ರಧಾನಿ ನರೇಂದ್ರ ಮೋದಿಯವರು ಎಕ್ಸ್ ಪೋಸ್ಟ್ ಮೂಲಕ ವಿನೇಶ್ ಫೋಗಟ್ ಅವರಿಗೆ ಧೈರ್ಯ ತುಂಬಿದ್ದಾರೆ. “ವಿನೇಶ್, ನೀವು ಚಾಂಪಿಯನ್ಗಳಲ್ಲಿ ಚಾಂಪಿಯನ್! ನೀವು ಭಾರತದ ಹೆಮ್ಮೆ ಮತ್ತು ಪ್ರತಿಯೊಬ್ಬ ಭಾರತೀಯರಿಗೂ ಸ್ಫೂರ್ತಿ. ಇಂದಿನ ಹಿನ್ನಡೆ ನೋವು ತಂದಿದೆ. ಪದಗಳು ನಾನು ಅನುಭವಿಸುತ್ತಿರುವ ಹತಾಶೆಯನ್ನು ವ್ಯಕ್ತಪಡಿಸಬಹುದು ಎಂದು ನಾನು ಬಯಸುತ್ತೇನೆ. ಇದೇ ಸಮಯದಲ್ಲಿ, ನೀವು ದೃಢವಾಗಿರುತ್ತೀರಿ ಎಂದು ನನಗೆ ತಿಳಿದಿದೆ. ಸವಾಲುಗಳನ್ನು ಎದುರಿಸುವುದು ಯಾವಾಗಲೂ ನಿಮ್ಮ ಸ್ವಭಾವವಾಗಿದೆ. ಮತ್ತಷ್ಟು ಬಲಿಷ್ಠವಾಗಿ ಹಿಂತಿರುಗಿ! ನಾವೆಲ್ಲರೂ ನಿಮಗಾಗಿ ನಿರೀಕ್ಷಿಸುತ್ತೇವೆ” ಎಂದಿದ್ದಾರೆ.
Vinesh, you are a champion among champions! You are India's pride and an inspiration for each and every Indian.
Today's setback hurts. I wish words could express the sense of despair that I am experiencing.
At the same time, I know that you epitomise resilience. It has always…
— Narendra Modi (@narendramodi) August 7, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.