ಲಕ್ನೋ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾಚಾರವನ್ನು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕಟುವಾಗಿ ಖಂಡಿಸಿದ್ದಾರೆ ಮತ್ತು ಸನಾತನ ಧರ್ಮವನ್ನು ರಕ್ಷಿಸಲು ಒಗ್ಗಟ್ಟಾಗಿ ನಿಲ್ಲುವ ಅಗತ್ಯವನ್ನು ಪ್ರತಿಪಾದಿಸಿದ್ದಾರೆ.
ಅಯೋಧ್ಯೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಅಯೋಧ್ಯೆಯಲ್ಲಿ ಅವರು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಮೊದಲ ಅಧ್ಯಕ್ಷರಾದ ಬ್ರಹ್ಮಲಿನ್ ಪರಮಹಂಸ ರಾಮಚಂದ್ರ ದಾಸ್ ಅವರ 21 ನೇ ಪುಣ್ಯತಿಥಿಯಂದು ಅವರಿಗೆ ಗೌರವ ಸಲ್ಲಿಸಿದರು ಮತ್ತು ಅವರ ಗೌರವಾರ್ಥ ಪ್ರತಿಮೆಯನ್ನು ಅನಾವರಣಗೊಳಿಸಿದರು.
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ನಮ್ಮ ಅಂತಿಮ ಗುರಿಯಲ್ಲ ಆದರೆ ಇದು ಮಹತ್ವದ ಮೈಲಿಗಲ್ಲು ಎಂದು ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ.
ಸರ್ಕಾರದ ವಿರುದ್ಧ ಸುದೀರ್ಘ ಪ್ರತಿಭಟನೆಗಳ ನಂತರ ಶೇಖ್ ಹಸೀನಾ ರಾಜೀನಾಮೆ ನೀಡಿದ ತರುವಾಯ ಬಾಂಗ್ಲಾದೇಶದಲ್ಲಿ ಅಶಾಂತಿ ಸೃಷ್ಟಿಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಇಂದು, ಭಾರತದ ಎಲ್ಲಾ ನೆರೆಹೊರೆಗಳು ಸುಟ್ಟುಹೋಗುತ್ತಿವೆ, ದೇವಾಲಯಗಳನ್ನು ಕೆಡವಲಾಗುತ್ತಿದೆ, ಹಿಂದೂಗಳನ್ನು ಗುರಿಯಾಗಿಸಲಾಗುತ್ತಿದೆ. ಇಂತಹ ದುರದೃಷ್ಟಕರ ಪರಿಸ್ಥಿತಿ ಅಲ್ಲಿ ಏಕೆ ಉದ್ಭವಿಸಿದೆ ಎಂಬುದನ್ನು ಅರಿಯಲು ಇತಿಹಾಸವನ್ನು ಕೆದಕುವ ಪ್ರಯತ್ನವನ್ನು ಈಗಲೂ ನಾವು ಮಾಡುತ್ತಿಲ್ಲ ಎಂಬುದು ದುರಾದೃಷ್ಟಕರ” ಎಂದಿದ್ದಾರೆ.
‘‘ಇತಿಹಾಸದ ತಪ್ಪುಗಳಿಂದ ಪಾಠ ಕಲಿಯದ ಸಮಾಜದ ಉಜ್ವಲ ಭವಿಷ್ಯಕ್ಕೆ ಗ್ರಹಣ ಹಿಡಿಯುತ್ತದೆ ಎಂಬುದನ್ನು ನೆನಪಿಟ್ಟುಕೊಳ್ಳಬೇಕು. ಸನಾತನ ಧರ್ಮಕ್ಕೆ ಆಗುತ್ತಿರುವ ಅಪಾಯವನ್ನು ಎದುರಿಸಲು ಮತ್ತೊಮ್ಮೆ ಒಗ್ಗಟ್ಟಿನಿಂದ ಶ್ರಮಿಸುವ ಅಗತ್ಯವಿದೆ. ಇದಕ್ಕಾಗಿ ಒಗ್ಗಟ್ಟಿನಿಂದ ಹೋರಾಡುವ ಅಗತ್ಯವಿದೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.