ನವದೆಹಲಿ: ಲೋಕಸಭೆಯಲ್ಲಿ ಪ್ರತಿಪಕ್ಷಗಳ ಗದ್ದಲದ ನಡುವೆಯೇ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ವಕ್ಫ್ (ತಿದ್ದುಪಡಿ) ಮಸೂದೆ 2024 ಅನ್ನು ಮಂಡಿಸಿದ್ದಾರೆ. 1995 ರ ವಕ್ಫ್ ಕಾಯಿದೆಗೆ ತಿದ್ದುಪಡಿ ಮಾಡುವ ಗುರಿಯನ್ನು ಇದು ಹೊಂದಿದೆ.
ವಕ್ಫ್ ಬೋರ್ಡ್ ಹೊಂದಿರುವ ಏಕಪಕ್ಷೀಯ ಅಧಿಕಾರಗಳನ್ನು ಕಡಿಮೆ ಮಾಡುವುದು ಮಸೂದೆಯ ಮುಖ್ಯ ಉದ್ದೇಶವಾಗಿದೆ. ಹಿಂದಿನ ಕಾಯ್ದೆಯಲ್ಲಿ ವಕ್ಫ್ ಬೋರ್ಡ್ಗೆ ಹೆಚ್ಚಿನ ಅಧಿಕಾರ ನೀಡಲಾಗಿತ್ತು. ಇದರಡಿ ಭೂಮಿಯನ್ನು ವಕ್ಫ್ ಬೋರ್ಡ್ನಿಂದ ಹಿಂಪಡೆಯುವುದು ಅಸಾಧ್ಯವಾಗಿತ್ತು. ಇದಾದ ನಂತರ ವಕ್ಫ್ ಬೋರ್ಡ್ ತೆಗೆದುಕೊಳ್ಳುವ ನಿರ್ಣಯಗಳು ಪದೇ ಪದೇ ವಿವಾದಕ್ಕೆ ಕಾರಣವಾಗುತ್ತಿದ್ದವು. ಇದನ್ನು ತಡೆಯುವುದರ ಸಲುವಾಗಿ ವಕ್ಫ್ ಕಾಯ್ದೆಗೆ ಕೇಂದ್ರ ತಿದ್ದುಪಡಿ ತಂದಿದೆ.
ಲೋಕಸಭೆಯಲ್ಲಿ ವಕ್ಫ್ (ತಿದ್ದುಪಡಿ) 2024ರ ಮಸೂದೆಯನ್ನು ಮಂಡಿಸುವುದನ್ನು ವಿರೋಧಿಸಿ ಕಾಂಗ್ರೆಸ್ ಲೋಕಸಭೆ ಸಂಸದ ಕೆಸಿ ವೇಣುಗೋಪಾಲ್ ಗುರುವಾರ ನೋಟಿಸ್ ಸಲ್ಲಿಸಿದ್ದರು. ಕಾಂಗ್ರೆಸ್ ಸಂಸದ ಹೈಬಿ ಈಡನ್ ಕೂಡ ಮಸೂದೆ ವಿರೋಧಿಸಿ ನೋಟಿಸ್ ಜಾರಿ ಮಾಡಿದ್ದಾರೆ. ಸಮಾಜವಾದಿ ಮತ್ತು ಇತರ ಪಕ್ಷಗಳು ಕೂಡ ಮಸೂದೆಯನ್ನು ತೀವ್ರವಾಗಿ ವಿರೋಧಿಸಿ ಸದನದಲ್ಲಿ ಗದ್ದಲವೆಬ್ಬಿಸಿದೆ.
#WATCH | Union Minister of Minority Affairs Kiren Rijiju moves Waqf (Amendment) Bill, 2024 in Lok Sabha pic.twitter.com/g65rf2tDow
— ANI (@ANI) August 8, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.