ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಸ್ಟ್ 10 ರಂದು ಕೇರಳದ ಭೂಕುಸಿತ ಪೀಡಿತ ವಯನಾಡ್ಗೆ ಭೇಟಿ ನೀಡಲಿದ್ದಾರೆ ಮತ್ತು ದುರಂತದಲ್ಲಿ ಬದುಕುಳಿದ ಸಂತ್ರಸ್ತರನ್ನು ಭೆಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿದೆ.
ಕಣ್ಣೂರಿಗೆ ಬಂದಿಳಿಯಲಿರುವ ಪ್ರಧಾನಿ ವಿಶೇಷ ವಿಮಾನದಲ್ಲಿ ವಯನಾಡಿಗೆ ಆಗಮಿಸಲಿದ್ದಾರೆ. ಅಲ್ಲಿ ಅವರು ಹೆಲಿಕಾಪ್ಟರ್ನಲ್ಲಿ ಭೂಕುಸಿತ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ನಂತರ ಅವರು 10,000 ಕ್ಕೂ ಹೆಚ್ಚು ಜನರು ಆಶ್ರಯ ಪಡೆದಿರುವ ಕೆಲವು ಪರಿಹಾರ ಶಿಬಿರಗಳಿಗೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.
ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕಣ್ಣೂರಿಗೆ ಆಗಮಿಸಿದ ನಂತರ ಪ್ರಧಾನಿ ಮೋದಿಯವರೊಂದಿಗೆ ಭೂಕುಸಿತ ಸ್ಥಳಕ್ಕೆ ಆಗಮಿಸುವ ನಿರೀಕ್ಷೆ ಇದೆ.
ಈ ನಡುವೆ ವಯನಾಡಿನ ಭೂಕುಸಿತದ ಭೀಕರ ದುರಂತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಕೇರಳ ಸರ್ಕಾರ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿವೆ.
ಭೂಕುಸಿತದ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 413 ಕ್ಕೆ ಏರಿದೆ, 152 ಜನರು ಇನ್ನೂ ನಾಪತ್ತೆಯಾಗಿದ್ದಾರೆ ಎಂದು ಸರ್ಕಾರದ ಅಂಕಿಅಂಶಗಳು ಹೇಳುತ್ತಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.