ಶ್ರೀನಗರ: ಕೇಂದ್ರಾಡಳಿತ ಪ್ರದೇಶವಾದ ಜಮ್ಮು-ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಗೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಇದಕ್ಕೂ ಮುನ್ನ ಚುನಾವಣಾ ಸಿದ್ಧತೆಗಳನ್ನು ಪರಿಶೀಲಿಸಲು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನೇತೃತ್ವದ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿಯೋಗ ಇಂದು ಶ್ರೀನಗರಕ್ಕೆ ತಲುಪಿದೆ.
ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಅವರು ಕೂಡ ನಿಯೋಗದ ಭಾಗವಾಗಿದ್ದರು.
ಪರಿಶೀಲನಾ ಪ್ರಕ್ರಿಯೆಯ ಭಾಗವಾಗಿ, ನಿಯೋಗವು ಜಮ್ಮು-ಕಾಶ್ಮೀರದಲ್ಲಿನ ಅಧಿಕಾರಿಗಳು ಮತ್ತು ವಿವಿಧ ರಾಜಕೀಯ ಪಕ್ಷಗಳ ಮುಖಂಡರನ್ನು ಭೇಟಿಯಾಗಿ ಅವರಿಂದ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿದೆ. ಅದ
ಸಂವಿಧಾನದ 370ನೇ ವಿಧಿ ರದ್ಧತಿ ಬಳಿಕ ಭಾರತದ ಇತರ ಭಾಗದೊಂದಿಗೆ ಸಂಪೂರ್ಣ ರೀತಿಯಲ್ಲಿ ವಿಲೀನಗೊಂಡಿರುವ ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ನಡೆಸಲು ಸುಪ್ರೀಂಕೋರ್ಟ್ ಸೆಪ್ಟೆಂಬರ್ ಗಡುವು ನೀಡಿದೆ.
ಹರಿಯಾಣ, ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳು ಕೂಡ ವಿಧಾನಸಭಾ ಚುನಾವಣೆಗೆ ಸಿದ್ಧವಾಗಿದ್ದು, ಚುನಾವಣಾ ಆಯೋಗ ಈಗಾಗಲೇ ಅಲ್ಲಿ ಚುನಾವಣೆಯ ಸಿದ್ಧತೆಗಳನ್ನು ಆರಂಭಿಸಿದೆ. ಮತದಾರರ ಪಟ್ಟಿಗಳ ನವೀಕರಣ ಆರಂಭಗೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.