ಪ್ಯಾರಿಸ್: ಖ್ಯಾತ ಹಾಕಿ ಗೋಲ್ಕೀಪರ್ ಪಿಆರ್ ಶ್ರೀಜೇಶ್ ಅವರು ಭಾನುವಾರ ಪ್ಯಾರಿಸ್ನಲ್ಲಿ ನಡೆಯಲಿರುವ ಒಲಿಂಪಿಕ್ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಸ್ಟಾರ್ ಶೂಟರ್ ಮನು ಭಾಕರ್ ಅವರೊಂದಿಗೆ ಭಾರತೀಯ ತಂಡದ ಧ್ವಜಧಾರಿಯಾಗಿ ಹೆಜ್ಜೆ ಹಾಕಲಿದ್ದಾರೆ
ಭಾರತೀಯ ಒಲಿಂಪಿಕ್ ಸಂಸ್ಥೆ (ಐಒಎ) ಶುಕ್ರವಾರ ಇದನ್ನು ಖಚಿತಪಡಿಸಿದೆ.
“ಪ್ಯಾರಿಸ್ 2024 ರ ಒಲಿಂಪಿಕ್ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಪಿಸ್ತೂಲ್ ಶೂಟರ್ ಮನು ಭಾಕರ್ ಅವರೊಂದಿಗೆ ಜಂಟಿ ಧ್ವಜಧಾರಿಯಾಗಿ ಹಾಕಿ ಗೋಲ್ಕೀಪರ್ ಪಿಆರ್ ಶ್ರೀಜೇಶ್ ಅವರನ್ನು ನಾಮನಿರ್ದೇಶನ ಮಾಡಲು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಸಂತೋಷಪಡುತ್ತದೆ” ಎಂದು ಐಒಎ ಹೇಳಿಕೆಯಲ್ಲಿ ತಿಳಿಸಿದೆ.
“ಶ್ರೀಜೇಶ್ ಅವರು ಭಾರತೀಯ ಒಲಿಂಪಿಕ್ ಸಂಸ್ಥೆಯ ಭಾವನಾತ್ಮಕ ಮತ್ತು ಜನಪ್ರಿಯ ಆಯ್ಕೆ” ಆಗಿದ್ದಾರೆ ಎಂದು ಐಒಎ ಅಧ್ಯಕ್ಷೆ ಪಿಟಿ ಉಷಾ ಹೇಳಿದ್ದಾರೆ.
ಒಲಿಂಪಿಕ್ನಲ್ಲಿ ಭಾರತೀಯ ಹಾಕಿ ತಂಡ ಕಂಚಿನ ಪದಕಕ್ಕೆ ಮುತ್ತಿಕ್ಕಿದೆ. ಇದು ಶ್ರೀಜೇಶ್ ಅವರ ಕೊನೆಯ ಆಟವಾಗಿತ್ತು, ಅವರು ಆಟದಿಂದ ನಿವೃತ್ತಿ ಘೋಷಿಸಿದ್ದಾರೆ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.