ನವದೆಹಲಿ: ಹಿಂದೂಗಳ ಮೇಲೆ ನಡೆಯುತ್ತಿರುವ ದಾಳಿಯ ಬಗ್ಗೆ ಮೌನವಹಿಸಿರುವ ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಸಂಸತ್ತಿನಲ್ಲಿ ರಾಹುಲ್ ಗಾಜಾ ಬಗ್ಗೆ ಮಾತನಾಡಿದ್ದಾರೆ ಆದರೆ ರಾಜಕೀಯ ಬಿಕ್ಕಟ್ಟಿನ ನಡುವೆ ನೆರೆಯ ದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದಾಳಿಗಳ ಬಗ್ಗೆ ಒಂದು ಮಾತನ್ನೂ ಇದುವರೆಗೆ ಹೇಳಿಲ್ಲ ಎಂದು ಠಾಕೂರ್ ಆರೋಪಿಸಿದ್ದಾರೆ.
“ನಮ್ಮ ನೆರೆಯ ದೇಶವಾದ ಬಾಂಗ್ಲಾದೇಶದಲ್ಲಿ ಏನಾಯಿತು ಎಂಬುದರ ಬಗ್ಗೆ ನಾವೆಲ್ಲರೂ ಚಿಂತಿತರಾಗಿದ್ದೇವೆ. ಅಲ್ಲಿನ ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ಸುರಕ್ಷತೆ ಮತ್ತು ಭದ್ರತೆ ಬಗ್ಗೆ ಎಲ್ಲಾ ಪಕ್ಷಗಳು ಒಮ್ಮತದಿಂದ ಕಳವಳ ವ್ಯಕ್ತಪಡಿಸಿವೆ, ಆದರೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಬಾಂಗ್ಲಾದ ಮಧ್ಯಂತರ ಸರ್ಕಾರದ ಮುಖ್ಯಸ್ಥನನ್ನು ಅಭಿನಂದಿಸುವಾಗ ಅಲ್ಲಿನ ಹಿಂದೂಗಳ ಬಗ್ಗೆ ಒಂದೇ ಒಂದು ಮಾತನ್ನು ಹೇಳದಿರುವುದು ದುರದೃಷ್ಟಕರ. ಗಾಜಾದ ಬಗ್ಗೆ ಮಾತನಾಡುವ ನೀವು ಬಾಂಗ್ಲಾದ ಬಗ್ಗೆ ಯಾಕೆ ಮಾತನಾಡುತ್ತಿಲ್ಲ” ಎಂದು ಠಾಕೂರ್ ಪ್ರಶ್ನೆ ಮಾಡಿದ್ದಾರೆ.
https://x.com/Indian_Analyzer/status/1821842435254731037?ref_src=twsrc%5Etfw%7Ctwcamp%5Etweetembed%7Ctwterm%5E1821842435254731037%7Ctwgr%5Ee3e246544efd317893903e26017f542b1f1f032a%7Ctwcon%5Es1_&ref_url=https%3A%2F%2Fwww.freepressjournal.in%2Findia%2Fgaza-pe-badi-badi-baatein-karte-ho-par-anurag-thakur-slams-rahul-gandhi-for-not-speaking-out-on-attacks-on-hindus-in-bangladesh-video
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.