ನವದೆಹಲಿ: 2024ರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಮತ್ತೊಂದು ಕಂಚು ದೊರೆತಿದೆ. ಭಾರತದ ಕುಸ್ತಿಪಟು ಅಮನ್ ಸೆಹ್ರಾವತ್ ಕುಸ್ತಿಯಲ್ಲಿ ಕಂಚಿನ ಪದಕಕ್ಕೆ ಮುತ್ತಿಕ್ಕಿಟ್ಟಿದ್ದಾರೆ.
ಪುರುಷರ 57 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಪೋರ್ಟೊ ರಿಕೊ ಕುಸ್ತಿಪಟು ಡೇರಿಯನ್ ಟೊಯಿ ಕ್ರೂಜ್ ಅವರನ್ನು 13-5 ರಿಂದ ಸೋಲಿಸಿದ ಅಮನ್ ಸೆಹ್ರಾವತ್ ಭಾರತಕ್ಕೆ ಹೆಮ್ಮೆ ತಂದಿದ್ದಾರೆ.
ಇದು ಈ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ದೊರೆತ ಐದನೇ ಕಂಚು ಮತ್ತು ಒಟ್ಟು ಆರನೇ ಪದಕವಾಗಿದೆ. ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ದೊರೆತ ಮೊದಲ ಪದಕ ಇದಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರು ಅಮನ್ ಸೆಹ್ರಾವತ್ ಅವರನ್ನು ಅಭಿನಂದಿಸಿದ್ದು, ” ನಮ್ಮ ಕುಸ್ತಿಪಟುಗಳಿಗೆ ಹೆಮ್ಮೆಯ ಕೃತಜ್ಞತೆಗಳು! ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಪುರುಷರ ಫ್ರೀಸ್ಟೈಲ್ 57 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದಕ್ಕಾಗಿ ಅಮನ್ ಸೆಹ್ರಾವತ್ ಅವರಿಗೆ ಅಭಿನಂದನೆಗಳು. ಅವರ ಸಮರ್ಪಣೆ ಮತ್ತು ಪರಿಶ್ರಮವು ಸ್ಪಷ್ಟವಾಗಿ ಪ್ರತಿಫಲಿಸಿದೆ. ಇಡೀ ರಾಷ್ಟ್ರವು ಈ ಅದ್ಭುತ ಸಾಧನೆಯನ್ನು ಆಚರಿಸುತ್ತದೆ” ಎಂದಿದ್ದಾರೆ.
https://x.com/narendramodi/status/1821971215713706404?ref_src=twsrc%5Etfw%7Ctwcamp%5Etweetembed%7Ctwterm%5E1821971215713706404%7Ctwgr%5E7db1ac238d047f8025b70920a360ba8d7e9c0b9f%7Ctwcon%5Es1_&ref_url=https%3A%2F%2Fwww.ndtv.com%2Findia-news%2Fparis-olympics-2024-his-dedication-clearly-evident-pm-narendra-modi-congratulates-wrestler-aman-sehrawat-6304850
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.