ಸಿಲಿಗುರಿ: ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಶುಕ್ರವಾರ ಬಿಎಸ್ಎಫ್ ಬಾಂಗ್ಲಾದೇಶದ ಗಡಿ ರಕ್ಷಣಾ ಪಡೆಯ ನೆರವಿನೊಂದಿಗೆ ಭಾರೀ ಪರಮಾಣದ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದೆ.
ಗಡಿ ಕಾವಲು ಪಡೆಯ ವಕ್ತಾರರ ಪ್ರಕಾರ, ಬಿಎಸ್ಎಫ್ ಸೈನಿಕರು ಭಾರತ-ಬಾಂಗ್ಲಾದೇಶದ ಗಡಿಯಾದ ಪಶ್ಚಿಮ ಬಂಗಾಳದ ಕೂಚ್ ಬೆಹಾರ್ನಲ್ಲಿ ಸುಮಾರು 1,000 ಬಾಂಗ್ಲಾದೇಶಿ ಪ್ರಜೆಗಳು ಭಾರತಕ್ಕೆ ನುಗ್ಗುವುದನ್ನು ತಡೆದಿದ್ದಾರೆ.
ಭಾರತದಲ್ಲಿ ಆಶ್ರಯ ಪಡೆಯಲು ಅಂತರರಾಷ್ಟ್ರೀಯ ಗಡಿಯಲ್ಲಿ ಅಪಾರ ಸಂಖ್ಯೆಯ ಬಾಂಗ್ಲಾ ಪ್ರಜೆಗಳು ಬೀಡು ಬಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
ಬಿಎಸ್ಎಫ್ ಇಷ್ಟೊಂದು ಸಂಖ್ಯೆಯ ಬಾಂಗ್ಲಾದೇಶಿ ಪ್ರಜೆಗಳನ್ನು ಹಿಂದಕ್ಕೆ ಕಳುಹಿಸಲು ಬಾಂಗ್ಲಾದ ಗಡಿ ರಕ್ಷಕ ಪಡೆಯನ್ನು ಸಂಪರ್ಕಿಸಿತು. ಈ ಮೂಲಕ ಪರಿಸ್ಥಿತಿಯನ್ನು ಮತ್ತಷ್ಟು ಉದ್ವಿಗ್ನಗೊಳಿಸದೆ ತಿಳಿಗೊಳಿಸಿತು ಎಂದು ಮೂಲಗಳು ತಿಳಿಸಿವೆ.
ಕೂಚ್ ಬೆಹಾರ್ ಜಿಲ್ಲೆಯ ನಾಗರಿಕ ಆಡಳಿತದ ಸಮನ್ವಯದೊಂದಿಗೆ ಬಿಎಸ್ಎಫ್ನ ತ್ವರಿತ ಮತ್ತು ನಿರ್ಣಾಯಕ ಕ್ರಮಗಳು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಮತ್ತು ಸಮಸ್ಯೆಯನ್ನು ಪರಿಹರಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದೆ. ಈ ಕಾರ್ಯ ಭಾರತದ ಗಡಿಗಳನ್ನು ರಕ್ಷಿಸಲು ಬಿಎಸ್ಎಫ್ನ ಅಚಲ ಬದ್ಧತೆಯನ್ನು ಒತ್ತಿಹೇಳುತ್ತದೆ. ಅಷ್ಟೇ ಅಲ್ಲದೇ ಮಾನವೀಯತೆಗೆ ಸಂಬಂಧಿಸಿದ ಸಮಸ್ಯೆಯನ್ನು ಸಹಾನುಭೂತಿ ಮತ್ತು ಅಂತರರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿ ಕಟ್ಟುನಿಟ್ಟಾಗಿ ಅನುಸರಿಸುವ ಮಹತ್ವವನ್ನು ಸಾರಿ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.