ನವದೆಹಲಿ: ಮೂರು ರಾಷ್ಟ್ರ ಭೇಟಿಯ ಭಾಗವಾಗಿ ರಾಮೋಸ್-ಹೊರ್ಟಾಗೆ ತೆರಳಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಅಲ್ಲಿನ ಅಧ್ಯಕ್ಷರು ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ.
ಸಾರ್ವಜನಿಕ ಸೇವೆಯಲ್ಲಿನ ಸಾಧನೆ ಮತ್ತು ಶಿಕ್ಷಣ, ಸಮಾಜ ಕಲ್ಯಾಣ ಮತ್ತು ಮಹಿಳಾ ಸಬಲೀಕರಣದಲ್ಲಿನ ಅವರ ಸಾಧನೆಯನ್ನು ಗುರುತಿಸಿ ರಾಮೋಸ್-ಹೊರ್ಟಾದ ಅಧ್ಯಕ್ಷ ಜೋಸ್ ರಾಮೋಸ್-ಹೊರ್ಟಾ ಅವರು ತಮ್ಮ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಆರ್ಡರ್ ಆಫ್ ಟಿಮೋರ್-ಲೆಸ್ಟೆ ಗ್ರ್ಯಾಂಡ್-ಕಾಲರ್ ಅನ್ನು ಶನಿವಾರ ಮುರ್ಮು ಅವರಿಗೆ ಪ್ರದಾನ ಮಾಡಿದರು.
ಮೂರು ರಾಷ್ಟ್ರಗಳ ಭೇಟಿಯ ಕೊನೆಯ ಹಂತದಲ್ಲಿ ಆಗ್ನೇಯ ಏಷ್ಯಾದ ಈ ದೇಶಕ್ಕೆ ಆಗಮಿಸಿರುವ ಮುರ್ಮು ಅವರಿಗೆ ದಿಲಿಯಲ್ಲಿ ವಿಧ್ಯುಕ್ತ ಸ್ವಾಗತ ಮತ್ತು ಗೌರವವನ್ನು ನೀಡಲಾಯಿತು.
ಬಳಿಕ ಮುರ್ಮು ಮತ್ತು ಜೋಸ್ ರಾಮೋಸ್-ಹೊರ್ಟಾ ಅವರು ದ್ವಿಪಕ್ಷೀಯ ಸಭೆಯನ್ನು ನಡೆಸಿದರು. ಉಭಯ ಮುಖಂಡರು ಎರಡು ಪ್ರಜಾಪ್ರಭುತ್ವ ರಾಷ್ಟ್ರಗಳ ನಡುವಿನ ಬಲವಾದ ಸಂಪರ್ಕ ಮತ್ತು ಸಹಕಾರವನ್ನು ಈ ಸಂದರ್ಭದಲ್ಲಿ ಒತ್ತಿಹೇಳಿದರು ಮತ್ತು ದ್ವಿಪಕ್ಷೀಯ ಸಂಬಂಧಗಳನ್ನು ಹೆಚ್ಚಿಸುವ ಅವಕಾಶಗಳ ಕುರಿತು ಚರ್ಚಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.