ನವದೆಹಲಿ: ಕಾಡಿನ ರಾಜ ಸಿಂಹದ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಆಗಸ್ಟ್ 10 ರಂದು ವಿಶ್ವ ಸಿಂಹ ದಿನವನ್ನು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಿಂಹಗಳ ರಕ್ಷಣೆ ಮತ್ತು ಸಂರಕ್ಷಣಾ ಕಾರ್ಯದಲ್ಲಿ ತೊಡಗಿರುವ ಎಲ್ಲ ವ್ಯಕ್ತಿಗಳನ್ನು ಶ್ಲಾಘಿಸಿದ್ದಾರೆ.
ಎಕ್ಸ್ ಪೋಸ್ಟ್ ಮಾಡಿರುವ ಮೋದಿ, ಗುಜರಾತ್ನ ಗಿರ್ ಭಾರತದ ದೊಡ್ಡ ಸಂಖ್ಯೆಯ ಸಿಂಹಗಳಿಗೆ ನೆಲೆಯಾಗಿದೆ. ವರ್ಷಗಳು ಕಳೆದಂತೆ ಸಿಂಹಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದ್ದು, ಇದು ಸಕಾರಾತ್ಮಕ ಬೆಳವಣಿಗೆಯಾಗಿದೆ ಎಂದು ತಿಳಿಸಿದ್ದಾರೆ.
ಈ ವರ್ಷದ ಫೆಬ್ರವರಿಯಲ್ಲಿ, ಸಿಂಹಗಳು ವಾಸಿಸುವ ವಿಶ್ವದ ಎಲ್ಲಾ ರಾಷ್ಟ್ರಗಳನ್ನು ಒಟ್ಟುಗೂಡಿಸಲು ಅಂತರರಾಷ್ಟ್ರೀಯ ಬಿಗ್ ಕ್ಯಾಟ್ ಅಲೈಯನ್ಸ್ ಸ್ಥಾಪನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಅವರು ಉಲ್ಲೇಖಿಸಿದ್ದಾರೆ. ಈ ಉಪಕ್ರಮವು ಸುಸ್ಥಿರ ಅಭಿವೃದ್ಧಿಯನ್ನು ಉತ್ತೇಜಿಸಲು ಸಮಗ್ರ ವಿಧಾನವನ್ನು ನಿರ್ಮಿಸಲು ಪ್ರಯತ್ನಿಸುತ್ತದೆ ಮತ್ತು ಈ ನಿಟ್ಟಿನಲ್ಲಿ ಸಮುದಾಯದ ಪ್ರಯತ್ನಗಳನ್ನು ಬೆಂಬಲಿಸುತ್ತದೆ . ಈ ಪ್ರಯತ್ನಕ್ಕೆ ಜಾಗತಿಕವಾಗಿ ಉತ್ತೇಜನಕಾರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದಿದ್ದಾರೆ.
ಅಪರೂಪದ ಏಷ್ಯಾಟಿಕ್ ಸಿಂಹಗಳನ್ನು ಅನ್ವೇಷಿಸಲು ಮತ್ತು ಗುಜರಾತ್ ಜನರ ಆತಿಥ್ಯವನ್ನು ಅನುಭವಿಸಲು, ಸಿಂಹಗಳನ್ನು ರಕ್ಷಿಸಲು ಕೈಗೊಂಡ ಪ್ರಯತ್ನಗಳನ್ನು ವೀಕ್ಷಿಸಲು ಗಿರ್ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡುವಂತೆ ಪ್ರಧಾನಿ ಮೋದಿ ಎಲ್ಲಾ ವನ್ಯಜೀವಿ ಪ್ರೇಮಿಗಳಿಗೆ ಆಹ್ವಾನವನ್ನು ನೀಡಿದ್ದಾರೆ.
On World Lion Day 🦁, I compliment all those working on Lion conservation and reiterate our commitment to protecting these majestic big cats. India, as we all know, is home to a large Lion population in Gir, Gujarat. Over the years, their numbers have increased significantly,… pic.twitter.com/PbnlhBlj71
— Narendra Modi (@narendramodi) August 10, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.