ಚೆನ್ನೈ: ತಮಿಳುನಾಡು ಪೊಲೀಸರ ಐಡಲ್ ವಿಂಗ್ ಇಂದು 15ನೇ ಶತಮಾನದ ವಿಷ್ಣುವಿನ ವಿಗ್ರಹವನ್ನು ವಶಪಡಿಸಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಜನರನ್ನು ಬಂಧಿಸಿದೆ.
ತಂಜಾವೂರು-ತಿರಿಚಿರಾಪಳ್ಳಿ ರಾಷ್ಟ್ರೀಯ ಹೆದ್ದಾರಿಯ ಮೇಲತಿರುವಿಜಪಟ್ಟಿಯಲ್ಲಿ ಕಾರನ್ನು ಅಡ್ಡಗಟ್ಟಿ ಎರಡೂವರೆ ಅಡಿಯ ವಿಷ್ಣುವಿಗ್ರಹವನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
“ಜಮೀನು ಅಗೆಯುತ್ತಿದ್ದಾಗ ತಂದೆಗೆ ವಿಗ್ರಹ ದೊರೆತಿದೆ. ಪೊಲೀಸರಿಗೆ ಮಾಹಿತಿ ನೀಡುವ ಬದಲು ಕುಟುಂಬದ ದನದ ಕೊಟ್ಟಿಗೆಯಲ್ಲಿ ವಿಗ್ರಹವನ್ನು ಬಚ್ಚಿಟ್ಟಿದ್ದರು. ತಂದೆ ಮರಣದ ನಂತರ ಅದನ್ನು ಮಾರಲು ನಾನು ಮುಂದಾದೆ. 2 ಕೋಟಿ ರೂಪಾಯಿಗಳಿಗೆ ಡೀಲ್ ನಡೆದಿತ್ತು” ಎಂದು ಆರೋಪಿಗಳಲ್ಲಿ ಒಬ್ಬನಾದ ದಿನೇಶ್ ತಪ್ಪೊಪ್ಪಿಕೊಂಡಿದ್ದಾನೆ.
ಕೂಲಂಕುಷವಾಗಿ ತನಿಖೆ ನಡೆಸಿದ ಪೊಲೀಸರು, ದಿನೇಶ್ ಬಳಿ ವಿಗ್ರಹದ ಯಾವುದೇ ಸರಿಯಾದ ದಾಖಲೆಗಳಿಲ್ಲ ಎಂಬುದನ್ನು ಪತ್ತೆ ಹಚ್ಚಿದ್ದಾರೆ. ಬಳಿಕ ದಿನೇಶ್ ಮತ್ತು ಆತನ ಸಹಚರರನ್ನು ಬಂಧಿಸಿದ್ದು, ಕುಂಭಕೋಣಂ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಈ ವಿಗ್ರಹವು 15 ಅಥವಾ 16ನೇ ಶತಮಾನಕ್ಕೆ ಸೇರಿದ್ದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ವಿಗ್ರಹವನ್ನು ಯಾವುದಾದರೂ ದೇವಸ್ಥಾನದಿಂದ ಕಳವು ಮಾಡಲಾಗಿದೆಯೇ ಎಂದು ತನಿಖೆ ಮುಂದುವರೆದಿದೆ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಐಎಎನ್ಎಸ್ಗೆ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.