ತಿರುವನಂತಪುರಂ: ವಯನಾಡಿನಲ್ಲಿ ಭೂಕುಸಿತದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿಇಂದು ವೈಮಾನಿಕ ಮತ್ತು ನೆಲದ ಸಮೀಕ್ಷೆಯನ್ನು ಕೈಗೊಂಡ ಪ್ರಧಾನಿ ನರೇಂದ್ರ ಮೋದಿ ಅವರು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರಜೊತೆ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಜುಲೈ 30 ರಂದು ವಯನಾಡಿನ ಚೂರಲ್ಮಲಾ ಮತ್ತು ಮುಂಡಕ್ಕೈನಲ್ಲಿ ಭಾರೀ ಭೂಕುಸಿತ ಸಂಭವಿಸಿದ ನಂತರ 300 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು. ಈ ಪ್ರದೇಶಕ್ಕೆ ಇಂದು ಮೋದಿ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದ್ದಾರೆ.
ಸಭೆಯಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್, ಕೇಂದ್ರ ಸಚಿವ ಸುರೇಶ್ ಗೋಪಿ, ರಾಜ್ಯ ಸಚಿವರಾದ ಎ ರಾಜನ್, ಎಕೆ ಶಸೀಂದ್ರನ್, ಪಿಎ ಮೊಹಮ್ಮದ್ ರಿಯಾಸ್ ಮತ್ತು ಕೇರಳ ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಎಂಆರ್ ಅಜಿತ್ ಕುಮಾರ್ ಉಪಸ್ಥಿತರಿದ್ದರು.
ಬಳಿಕ ಮಾತನಾಡಿರುವ ಮೋದಿ, ದುರಂತದಲ್ಲಿ ಎಲ್ಲವನ್ನೂ ಕಳೆದುಕೊಂಡವರಿಗೆ ಸಹಾಯ ಮಾಡಲು ಕೇಂದ್ರವು ಕೇರಳ ಸರ್ಕಾರದೊಂದಿಗೆ ಒಟ್ಟಾಗಿ ನಿಲ್ಲುತ್ತದೆ. ಭೂಕುಸಿತದಿಂದ ಇಲ್ಲಿಯವರೆಗೆ 226 ಜನರು ಸಾವನ್ನಪ್ಪಿದ್ದಾರೆ, 130 ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದರು.
Our prayers are with those affected by the landslide in Wayanad. The Centre assures every possible support to aid in relief efforts.https://t.co/3fS83dFmrp
— Narendra Modi (@narendramodi) August 10, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.