ಢಾಕಾ: ಶೇಖ್ ಹಸೀನಾ ಅವರು ಭಾರತದಲ್ಲಿ ನೆಲೆಸುವುದರಿಂದ ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎಂದು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಹಿರಿಯ ಸಲಹೆಗಾರ ಎಂಡಿ ತೌಹಿದ್ ಹೊಸೈನ್ ಹೇಳಿದ್ದಾರೆ.
ಬಾಂಗ್ಲಾದೇಶವು ಭಾರತದೊಂದಿಗೆ ಸೌಹಾರ್ದಯುತ ಸಂಬಂಧವನ್ನು ಕಾಪಾಡಿಕೊಳ್ಳಲು ನಿರಂತರವಾಗಿ ಶ್ರಮಿಸುತ್ತದೆ. ಭಾರತದಲ್ಲಿ ಹಸೀನಾ ಅವರು ತಮ್ಮ ವಾಸ್ತವ್ಯವನ್ನು ವಿಸ್ತರಿಸಿದರೆ ದ್ವಿಪಕ್ಷೀಯ ಸಂಬಂಧಗಳ ಮೇಲೆ ಪರಿಣಾಮಗಳು ಬೀರುತ್ತದೆ ಎಂಬುದು ಕಪೋಲಕಲ್ಪಿತ ಅನಿಸಿಕೆ. ಯಾರಾದರೂ ಒಂದು ದೇಶದಲ್ಲಿ ನೆಲೆಸಿದ್ದರೆ, ಅದು ಆ ದೇಶದೊಂದಿಗಿನ ಸಂಬಂಧದ ಮೇಲೆ ಏಕೆ ಪರಿಣಾಮ ಬೀರುತ್ತದೆ? ಇಂತಹ ಅನಿಸಿಕೆಗೆ ಯಾವುದೇ ಆಧಾರವಿಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.
“ಬಾಂಗ್ಲಾದೇಶ ಮತ್ತು ಭಾರತ ಎರಡೂ ರಾಷ್ಟ್ರಗಳು ತಮ್ಮ ಹಿತಾಸಕ್ತಿಗಳನ್ನು ಹೊಂದಿವೆ. ಭಾರತವು ತನ್ನ ಹಿತಾಸಕ್ತಿಗಳನ್ನು ಹೊಂದಿದೆ ಮತ್ತು ಬಾಂಗ್ಲಾದೇಶವು ತನ್ನದೇ ಆದ ಹಿತಾಸಕ್ತಿಗಳನ್ನು ಹೊಂದಿದೆ. ನಾವು ಭಾರತದೊಂದಿಗೆ ಸದಾ ಉತ್ತಮ ಸಂಬಂಧವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತೇವೆ” ಎಂದು ಹೊಸೈನ್ ಪುನರುಚ್ಚರಿಸಿದರು.
“ನಾವು ಬಾಂಗ್ಲಾದೇಶದ ಹೊಸ ಭವಿಷ್ಯದ ಕಡೆಗೆ ಮುಖ ಮಾಡುವಾಗ ಅಂತರಾಷ್ಟ್ರೀಯ ಸಮುದಾಯದಲ್ಲಿನ ನಮ್ಮ ಎಲ್ಲಾ ಸ್ನೇಹಿತರು ಮತ್ತು ಪಾಲುದಾರರು ಮಧ್ಯಂತರ ಸರ್ಕಾರ ಮತ್ತು ನಮ್ಮ ಜನರನ್ನು ಬೆಂಬಲಿಸುವುದನ್ನು ಮುಂದುವರಿಸುತ್ತಾರೆ ಎಂದು ನಮಗೆ ವಿಶ್ವಾಸವಿದೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.