ನವದೆಹಲಿ: ಬೃಹತ್ ದಂಗೆ ನಡೆದು ತನ್ನ ಸರ್ಕಾರದ ಪತನದ ನಂತರ ಭಾರತಕ್ಕೆ ಪಲಾಯನ ಮಾಡಿರುವ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ಕೊನೆಗೂ ಇದುವರೆಗಿನ ಬೆಳವಣಿಗೆಗಳ ಬಗ್ಗೆ ತಮ್ಮ ಮೌನ ಮುರಿದಿದ್ದಾರೆ. ಅಲ್ಲದೇ ತನ್ನ ದೇಶದಲ್ಲಿ ಆಂದೋಲನದ ಹೆಸರಿನಲ್ಲಿ ನಡೆಸಿದ ಹತ್ಯೆಗಳು, ವಿಧ್ವಂಸಕತೆ ಮತ್ತು ಬೆಂಕಿ ಹಚ್ಚುವಿಕೆಯ ಪ್ರಕರಣಗಳ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.
ತಪ್ಪಿತಸ್ಥರನ್ನು ಗುರುತಿಸಿ ನ್ಯಾಯಾಂಗದ ಮುಂದೆ ತರಬೇಕು ಎಂದು ಹಸೀನಾ ಒತ್ತಾಯಿಸಿದ್ದಾರೆ ಎಂದು ಡೈಲಿ ಸ್ಟಾರ್ ವರದಿ ಮಾಡಿದೆ. ಹಸೀನಾ ಅವರ ಪುತ್ರ ಸಜೀಬ್ ವಾಝೆದ್ ಜಾಯ್ ಅವರು ತಮ್ಮ ಫೇಸ್ಬುಕ್ ಪೇಜ್ನಲ್ಲಿ ಅವರ ಹೇಳಿಕೆಯನ್ನು ಪೋಸ್ಟ್ ಮಾಡಿದ್ದಾರೆ.
500 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ವಿದ್ಯಾರ್ಥಿಗಳ ಪ್ರತಿಭಟನೆಯ ನಂತರ ಹಸೀನಾ ಅವರನ್ನು ಆಗಸ್ಟ್ 5 ರಂದು ಒತ್ತಾಯಪೂರ್ವಕವಾಗಿ ಅಧಿಕಾರದಿಂದ ಕೆಳಗಿಳಸಲಾಯಿತು. ಅವರು
“ಜುಲೈನಿಂದ, ಹಿಂಸಾಚಾರ, ಪ್ರತಿಭಟನೆಯ ಹೆಸರಿನಲ್ಲಿ ಬೆಂಕಿ ಹಚ್ಚುವ ಮೂಲಕ ಸಾಕಷ್ಟು ಜೀವಗಳನ್ನು ಕಳೆದುಕೊಂಡಿದ್ದೇವೆ. ವಿದ್ಯಾರ್ಥಿಗಳು, ಶಿಕ್ಷಕರು, ಪೊಲೀಸರು, ಪತ್ರಕರ್ತರು, ಸಾಂಸ್ಕೃತಿಕ ಕಾರ್ಯಕರ್ತರು ಸೇರಿದಂತೆ ಸಂತ್ರಸ್ತರಿಗೆ ನನ್ನ ಸಂತಾಪ ಮತ್ತು ಪ್ರಾರ್ಥನೆಗಳನ್ನು ವ್ಯಕ್ತಪಡಿಸುತ್ತೇನೆ. ಗರ್ಭಿಣಿ ಪೊಲೀಸ್ ಮಹಿಳೆ, ಅವಾಮಿ ಲೀಗ್ನ ಸದಸ್ಯರು ಮತ್ತು ಅದರ ಸಹವರ್ತಿ ಸಂಸ್ಥೆಗಳು, ಜನಸಾಮಾನ್ಯರು ಮತ್ತು ವಿವಿಧ ವೃತ್ತಿಪರರು ಅನುಭವಿಸಿದ ಯಾತನೆ ಬಗ್ಗೆ ಸಂತಾಪವಿದೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.