ಬೆಂಗಳೂರು: ಪಶ್ಚಿಮ ಬಂಗಾಲದಲ್ಲಿ ಟ್ರೈನಿ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ಸಾಕಷ್ಟು ಸಾಕ್ಷ್ಯ ನಾಶವಾಗುವ ಸಾಧ್ಯತೆಗಳಿದ್ದು, ದೇಶಾದ್ಯಂತ ಜನರ ಆಕ್ರೋಶದ ಮಧ್ಯೆಯೇ ಕಲ್ಕತ್ತ ಹೈಕೋರ್ಟ್ ಈ ಘಟನೆಯ ತನಿಖೆಯನ್ನು ಸಿಬಿಐಗೆ ಒಪ್ಪಿಸಿದ್ದನ್ನು ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಕು. ಮಂಜುಳಾ ಅವರು ಸ್ವಾಗತಿಸಿದ್ದಾರೆ.
ರಾಜ್ಯ ಸರಕಾರಗಳ ಕೆಸರೆರಚಾಟ ಮತ್ತು ನಿರ್ಲಕ್ಷ್ಯಗಳ ಮಧ್ಯೆ ನ್ಯಾಯಾಲಯವು ಮಧ್ಯಪ್ರವೇಶಿಸಿ ತನಿಖೆಯನ್ನು ಸಿಬಿಐಗೆ ಕೊಟ್ಟಿರುವುದು ಮಹಿಳೆಯರಲ್ಲಿ ನೈತಿಕ ಶಕ್ತಿಯನ್ನು ಹೆಚ್ಚು ಮಾಡಿದೆ ಎಂದು ಅವರು ವಿಶ್ಲೇಷಿಸಿದ್ದಾರೆ.
ಸುಮಾರು ಆರು ತಿಂಗಳ ಹಿಂದೆ ಸಂದೇಶ್ಖಲಿಯಲ್ಲಿ ಕೂಡ ಅತ್ಯಾಚಾರ ಘಟನೆಯನ್ನು ಖಂಡಿಸಿ ಇಡೀ ದೇಶದ ಮಹಿಳೆಯರು ತೆರಳಿ, ಲಕ್ಷಾಂತರ ಮಹಿಳೆಯರು ಸೇರಿ ಮಮತಾ ಬ್ಯಾನರ್ಜಿಯವರ ಮಹಿಳಾ ವಿರೋಧಿ ನೀತಿಯನ್ನು ಖಂಡಿಸಿದ್ದರು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಲ್ಕತ್ತದಲ್ಲಿ ಕೊಲೆ, ಸುಲಿಗೆ ಎಂಬುದು ಅತ್ಯಂತ ಸಾಮಾನ್ಯವಾಗಿರುವುದು ಖೇದದ ವಿಚಾರ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.